ADVERTISEMENT

ರಜಿಯಾ ಬಳಬಟ್ಟೆಗೆ ಜಯದೇವಿತಾಯಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 29 ಜೂನ್ 2024, 4:17 IST
Last Updated 29 ಜೂನ್ 2024, 4:17 IST
ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಶುಕ್ರವಾರ ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿಯಿಂದ ನಡೆದ ಕಾರ್ಯಕ್ರಮದಲ್ಲಿ ರಜಿಯಾ ಬಳಬಟ್ಟೆ ಅವರಿಗೆ ಪ್ರಸಕ್ತ ಸಾಲಿನ ‘ಡಾ.ಜಯದೇವಿತಾಯಿ ಲಿಗಾಡೆ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಮಂಡಳಿ ಅಧ್ಯಕ್ಷ ಭಾಲ್ಕಿ ಬಸವಲಿಂಗ ಪಟ್ಟದ್ದೇವರು, ಸೋನಲ್ ವಿಜಯಸಿಂಗ್ ಉಪಸ್ಥಿತರಿದ್ದರು
ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಶುಕ್ರವಾರ ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿಯಿಂದ ನಡೆದ ಕಾರ್ಯಕ್ರಮದಲ್ಲಿ ರಜಿಯಾ ಬಳಬಟ್ಟೆ ಅವರಿಗೆ ಪ್ರಸಕ್ತ ಸಾಲಿನ ‘ಡಾ.ಜಯದೇವಿತಾಯಿ ಲಿಗಾಡೆ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಮಂಡಳಿ ಅಧ್ಯಕ್ಷ ಭಾಲ್ಕಿ ಬಸವಲಿಂಗ ಪಟ್ಟದ್ದೇವರು, ಸೋನಲ್ ವಿಜಯಸಿಂಗ್ ಉಪಸ್ಥಿತರಿದ್ದರು   

ಬಸವಕಲ್ಯಾಣ: ನಗರದ ಅನುಭವ ಮಂಟಪದಲ್ಲಿ ಶುಕ್ರವಾರ ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿಯಿಂದ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಾಹಿತಿ ರಜಿಯಾ ಬಳಬಟ್ಟೆ ಅವರಿಗೆ ಪ್ರಸಕ್ತ ಸಾಲಿನ ‘ಡಾ.ಜಯದೇವಿತಾಯಿ ಲಿಗಾಡೆ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ನಗದು ₹ 11 ಸಾವಿರ ಹಾಗೂ ಫಲಕ ನೀಡಿ ಅವರನ್ನು ಸನ್ಮಾನಿಸಲಾಯಿತು.

ಪ್ರಶಸ್ತಿ ಪ್ರದಾನ ಮಾಡಿದ ಮಂಡಳಿ ಅಧ್ಯಕ್ಷ ಭಾಲ್ಕಿ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ‘ಜಯದೇವಿತಾಯಿ ಲಿಗಾಡೆ ಅವರು ಸೋಲಾಪುರದಲ್ಲಿ ಜನಿಸಿದರೂ ಮುಪ್ಪಿನ ಕಾಲಕ್ಕೆ ಶರಣರ ನಾಡು ಬಸವಕಲ್ಯಾಣದಲ್ಲಿ ಸ್ವಂತ ಮನೆ ಕಟ್ಟಿಕೊಂಡು ವಾಸಿಸಿದರು. ಅವರ ಸಮಾಧಿಯೂ ಇಲ್ಲಿಯೇ ಇದೆ’ ಎಂದರು.

‘ಜಯದೇವಿತಾಯಿ ಶರಣ ಸಾಹಿತಿ ಆಗಿದ್ದರು. ವಚನಗಳನ್ನು ಮರಾಠಿಗೆ ಅನುವಾದಿಸಿ, ಅಲ್ಲಿನವರಿಗೆ ಬಸವಾದಿ ಶರಣರ ಸಾಹಿತ್ಯದ ಪರಿಚಯ ಮಾಡಿಕೊಟ್ಟರು. ಕರ್ನಾಟಕ ಏಕೀಕರಣಕ್ಕಾಗಿಯೂ ಹೋರಾಡಿದರು. ಅವರ ಜನ್ಮದಿನದಂದು ಪ್ರತಿವರ್ಷ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

ಪ್ರಮುಖರಾದ ಸೋನಲ್ ವಿಜಯಸಿಂಗ್, ವಿಶ್ವನಾಥ ಮುಕ್ತಾ, ಚೇತನಾ ಪಾಟೀಲ ಮಾತನಾಡಿದರು.

ಶಿವಾನಂದ ಸ್ವಾಮೀಜಿ, ಅಕ್ಕನಾಗಮ್ಮ ಹುಬ್ಬಳ್ಳಿ, ವಿಶ್ವಸ್ಥ ಮಂಡಳಿ ಉಪಾಧ್ಯಕ್ಷ ವೈಜನಾಥ ಕಾಮಶೆಟ್ಟಿ, ಕುಪೇಂದ್ರ ಪಾಟೀಲ, ಕಾರ್ಯದರ್ಶಿ ಡಾ. ಎಸ್.ಬಿ. ದುರ್ಗೆ, ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಗುರುನಾಥ ಗಡ್ಡೆ, ಸುಮಿತ್ರಾ ದಾವಣಗಾವೆ, ವಿರೂಜಾ ಪಾಟೀಲ, ಶಿವಕುಮಾರ ಬಿರಾದಾರ, ರಾಜಕುಮಾರ ಮದಕಟ್ಟಿ, ಶಂಕರ ಮದರಗೈ, ಗಂಗಾಧರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.