ADVERTISEMENT

ಬೀದರ್‌: ಕಿರಿಯ ಎಂಜಿನಿಯರ್‌, ಪಿಡಿಒ ಅಮಾನತು

ಕಾಮಗಾರಿ ನಿರ್ವಹಿಸದೆ ಹಣ ದುರ್ಬಳಕೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2024, 14:44 IST
Last Updated 17 ಜನವರಿ 2024, 14:44 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೀದರ್‌: ಕಾಮಗಾರಿಗಳನ್ನು ನಿರ್ವಹಿಸದೆ ಸುಳ್ಳು ಬಿಲ್‌ ಸೃಷ್ಟಿಸಿ, ಹಣ ದುರ್ಬಳಕೆ ಮಾಡಿಕೊಂಡಿದ್ದರಿಂದ ಜಿಲ್ಲೆಯ ಔರಾದ್‌ (ಬಿ)ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಕಿರಿಯ ಎಂಜಿನಿಯರ್‌ ಶಿವರಾಜ ಪಾಟೀಲ ಮತ್ತು ಕೌಠಾ (ಬಿ) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಭುದಾಸ ಜಾಧವ ಅವರನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ದಿಲೀಪ ಬದೋಲೆ ಅಮಾನತುಗೊಳಿಸಿದ್ದಾರೆ.

ಇಬ್ಬರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆಯೂ ಸಂಬಂಧಿಸಿದ ಇಲಾಖೆಗಳ ಮೇಲಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ADVERTISEMENT

ಶಿವರಾಜ ಪಾಟೀಲ, ಕೌಠಾ (ಬಿ) ಗ್ರಾಮದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದೆ ಸುಳ್ಳು ಬಿಲ್ ಸೃಷ್ಟಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಪಿಡಿಒ ಪ್ರಭುದಾಸ ಜಾಧವ ಅವಕಾಶವಿಲ್ಲದಿದ್ದರೂ ಪಂಚಾಯಿತಿ ಆದಾಯದ ₹26 ಸಾವಿರ ಹಣವನ್ನು ಚುನಾವಣಾ ಖರ್ಚಿಗೆ ಬಳಸಿದ್ದಾರೆ. ಪಂಚಾಯಿತಿಯಲ್ಲಿ ಕಾಮಗಾರಿಗಳನ್ನು ನಿರ್ವಹಿಸದೆ ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡಿದ್ದರಿಂದ ಕ್ರಮ ಜರುಗಿಸಲಾಗಿದೆ ಎಂದು ಬುಧವಾರ ಜಿಲ್ಲಾ ಪಂಚಾಯಿತಿ ಸಿಇಒ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.