ಬೀದರ್: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಗರದಲ್ಲಿ ಶುಕ್ರವಾರ ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಆ ಶಾಲೆಗಳ ಮುಖ್ಯಶಿಕ್ಷಕರಿಗೆ ಪ್ರತಿಭಾ ಪುರಸ್ಕಾರ ಹಾಗೂ ಯುನೈಟೆಡ್ ಕಿಂಗ್‍ಡಂ ಕಸಾಪ ಯುವ ಗೌರವ ಸಂಚಾಲಕರಾಗಿ ನೇಮಕಗೊಂಡಿರುವ ಆದೀಶ್ ರಜನೀಶ್ ವಾಲಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಛಲವಿದ್ದರೆ ಜೀವನದಲ್ಲಿ ಸಾಧನೆ ಸಾಧ್ಯ. ಸಾಧನೆಗೆ ಏನೇನು ಬೇಕೋ ಅದೆಲ್ಲವೂ ನಮ್ಮೊಳಗೇ ಇದೆ. ನಾವು ಪ್ರಯತ್ನ ಪಡಬೇಕಷ್ಟೇ. ನಾಡು, ದೇಶ, ಸಮಾಜಕ್ಕಾಗಿ ಮಾಡಿದ ಕಾರ್ಯಗಳು ಗೌರವ ತಂದುಕೊಡುತ್ತವೆ. ಅದಕ್ಕೆ ಆದೀಶ್ ವಾಲಿ ತಾಜಾ ನಿದರ್ಶನ ಎಂದರು.
ಆದೀಶ್ ವಾಲಿ ಮಾತನಾಡಿ, ಜೀವನದಲ್ಲಿ ದೊಡ್ಡ ಕನಸು ಕಾಣಬೇಕು. ಏನಾಗಬೇಕು ಎನ್ನುವ ಸ್ಪಷ್ಟ ಗುರಿ ಇಟ್ಟುಕೊಳ್ಳಬೇಕು. ಅದನ್ನು ನನಸಾಗಿಸಲು ನಿರಂತರ ಶ್ರಮಿಸಬೇಕು ಎಂದು ಹೇಳಿದರು.
ಆತ್ಮವಿಶ್ವಾಸ, ಕಠಿಣ ಪರಿಶ್ರಮದಿಂದ ನನಗೆ ವಿವಿಧ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸಲು ಹಾಗೂ ವಿದೇಶಿ ನೆಲದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಆಯ್ಕೆಯಾಗಲು ಸಾಧ್ಯವಾಯಿತು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಹುಲಸೂರಿನ ಶಿವಾನಂದ ಸ್ವಾಮೀಜಿ, ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಜ್ಯೋತಿರ್ಮಯಾನಂದ ಸ್ವಾಮೀಜಿ, ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪ್ರೊ. ಪೂರ್ಣಿಮಾ ಜಿ., ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಗೌರವ ಕಾರ್ಯದರ್ಶಿ ಶಿವಕುಮಾರ ಕಟ್ಟೆ, ಗೌರವ ಕಾರ್ಯದರ್ಶಿ ಶಿವಶಂಕರ ಟೋಕರೆ, ಬಿಡಿಎ ಮಾಜಿ ಅಧ್ಯಕ್ಷ ಬಾಬುವಾಲಿ, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಅಬ್ದುಲ್ ಖದೀರ್, ಕೆಆರ್‌ಇ ನ್ಯಾಸ್ ಅಧ್ಯಕ್ಷ ಡಾ.ಬಸವರಾಜ ಪಾಟೀಲ ಅಷ್ಟೂರ, ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಿಠಾರೆ, ಎಚ್.ಕೆ.ಇ. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ್ ವಾಲಿ, ಅಂಜನಾ ವಾಲಿ, ದೀಪಕ್ ವಾಲಿ, ಭೀಮಣ್ಣ ಹಡಪದ, ವಿಜಯಕುಮಾರ ಪಾಟೀಲ ಯರನಳ್ಳಿ, ಡಾ,. ಪಿ. ವಿಠ್ಠಲರೆಡ್ಡಿ, ದೀಪಾ ರಾಗಾ, ಮಲ್ಲಿಕಾರ್ಜುನ ಕನಕಟ್ಟೆ, ಲಲಿತಾ ಸ್ವಾಮಿ, ಶೀಲಾ ದಿವಾಕರ್, ವೀಣಾ ಜಲಾದೆ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.