ADVERTISEMENT

ಬೀದರ್‌: ಜಿಲ್ಲಾಡಳಿತ, ಕಾಂಗ್ರೆಸ್‌ನಿಂದ ಕೆಂಪೇಗೌಡ ಜಯಂತಿ

​ಪ್ರಜಾವಾಣಿ ವಾರ್ತೆ
Published 27 ಜೂನ್ 2024, 16:14 IST
Last Updated 27 ಜೂನ್ 2024, 16:14 IST
ಬೀದರ್‌ನಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಉದ್ಘಾಟಿಸಿದರು
ಬೀದರ್‌ನಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಉದ್ಘಾಟಿಸಿದರು   

ಬೀದರ್‌: ಜಿಲ್ಲಾಡಳಿತ ಹಾಗೂ ಕಾಂಗ್ರೆಸ್‌ ಪಕ್ಷದಿಂದ ನಗರದಲ್ಲಿ ಪ್ರತ್ಯೇಕವಾಗಿ ಗುರುವಾರ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರಳವಾಗಿ ಏರ್ಪಡಿಸಿದ್ದ ಜಯಂತಿ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಿ ಉದ್ಘಾಟಿಸಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಸುರೇಖಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ವಾರ್ತಾ ಅಧಿಕಾರಿ ಜಿ. ಸುರೇಶ. ಜಿಲ್ಲಾಧಿಕಾರಿ ಕಚೇರಿಯ ಉಪ ತಹಶೀಲ್ದಾರ್‌ಗಳಾದ ಕಿರಣಕುಮಾರ, ರಾಜಕುಮಾರ ‌ರೂಡೆ ಮತ್ತಿತರರು ಹಾಜರಿದ್ದರು.


ಕಾಂಗ್ರೆಸ್ ಪಕ್ಷ:

ನಗರದ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ಗೌರವಿಸಲಾಯಿತು. ಕೆಪಿಸಿಸಿ ಉಪಾಧ್ಯಕ್ಷ ಜಾನ್ ವೆಸ್ಲಿ, ಪ್ರಧಾನ ಕಾರ್ಯದರ್ಶಿ ಶಂಕರ ದೊಡ್ಡಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಮುಖಂಡರಾದ ಗೋವರ್ಧನ್ ರಾಠೋಡ್, ಪರ್ವೇಜ್ ಕಮಲ್, ಸೋಮನಾಥ ಕಂದಗೂಳ, ಶರಣಪ್ಪ ಶರ್ಮಾ, ಉದಯಕುಮಾರ ಮೂಲಗೆ ಮತ್ತಿತರರು ಪಾಲ್ಗೊಂಡಿದ್ದರು.

ADVERTISEMENT
ಬೀದರ್‌ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.