ADVERTISEMENT

ಕೊಂಗಳಿ ಗ್ರಾಮಕ್ಕೆ ಸಂಪರ್ಕಿಸುವ ಸೇತುವೆ: ತಾತ್ಕಾಲಿಕ ದುರಸ್ತಿ

ಪ್ರಜಾವಾಣಿ ವರದಿ ಪರಿಣಾಮ

​ಪ್ರಜಾವಾಣಿ ವಾರ್ತೆ
Published 18 ಜೂನ್ 2024, 5:10 IST
Last Updated 18 ಜೂನ್ 2024, 5:10 IST
ಹುಲಸೂರ ಸಮೀಪದ ಕೊಂಗಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯನ್ನು ಜೆಸಿಬಿ ಮೂಲಕ ದುರಸ್ತಿ ಮಾಡುತ್ತಿರುವುದು
ಹುಲಸೂರ ಸಮೀಪದ ಕೊಂಗಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯನ್ನು ಜೆಸಿಬಿ ಮೂಲಕ ದುರಸ್ತಿ ಮಾಡುತ್ತಿರುವುದು    

ಹುಲಸೂರ: ಭಾಲ್ಕಿ ತಾಲ್ಲೂಕಿನ ಕೊಂಗಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹಾಳಾದ ಸೇತುವೆಯನ್ನು ತಾತ್ಕಾಲಿಕವಾಗಿ ದುರಸ್ತಿಮಾಡಿ ಲೋಕೋಪಯೋಗಿ ಅಧಿಕಾರಿಗಳು ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಕೊಂಗಳಿ ಗ್ರಾಮದಿಂದ ಹುಲಸೂರು ಸೇರಿ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಚಿಕ್ಕದೊಂದು ಸೇತುವೆಯಿದ್ದು ಮಾಂಜ್ರಾ ನದಿಯಲ್ಲಿ ಪ್ರವಾಹ ಬಂದರೆ ಮುಳುಗುತ್ತದೆ. ಇದರಿಂದ ಕೊಂಗಳಿ ಸೇರಿ ವಿವಿಧ ಗ್ರಾಮಗಳಿಗೆ ಹೋಗಲು ಇರುವ ಏಕೈಕ ರಸ್ತೆ ಕಡಿತವಾಗಿತ್ತು.

ಈ ವಿಷಯಕ್ಕೆ ಸಂಬಂಧಿಸಿದಂತೆ ಜೂನ್ 14 ರ ಪ್ರಜಾವಾಣಿ ದಿನಪತ್ರಿಕೆಯಲ್ಲಿ ’ಮಳೆ ಬಂದರೆ ರಸ್ತೆ ಸಂಪರ್ಕ ಕಡಿತ' ಶೀರ್ಷಿಕೆ ಅಡಿಯಲ್ಲಿ ವರದಿ ಪ್ರಕಟಗೊಂಡಿತ್ತು.

ADVERTISEMENT

ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೆ ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ಮಾಡಿ ಹಾಳಾದ ಸೇತುವೆಗೆ ಮಣ್ಣು ಹಾಕುವ ಮೂಲಕ ವಾಹನಗಳ ಸಂಚಾರಕ್ಕೆ ತಾತ್ಕಾಲಿಕವಾಗಿ ಅನುಕೂಲ ಮಾಡಿಕೊಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.