ADVERTISEMENT

ಬೀದರ್‌ | ಕುಡುಗೋಲಿನಿಂದ ಹಲ್ಲೆ; ವಕೀಲರ ಸಂಘ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2024, 2:36 IST
Last Updated 23 ನವೆಂಬರ್ 2024, 2:36 IST
ಜಿಲ್ಲಾ ವಕೀಲರ ಸಂಘದಿಂದ ಬೀದರ್‌ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು
ಜಿಲ್ಲಾ ವಕೀಲರ ಸಂಘದಿಂದ ಬೀದರ್‌ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು   

ಬೀದರ್‌: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನ ನ್ಯಾಯಾಲಯದ ಸಂಕೀರ್ಣದಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಸದಸ್ಯ ಕಣ್ಣನ್‌ ಅವರ ಮೇಲೆ ನಡೆದ ಹಲ್ಲೆ ಘಟನೆ ಖಂಡಿಸಿ ಜಿಲ್ಲಾ ವಕೀಲರ ಸಂಘದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ವಕೀಲರ ಸಂಘದ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್‍ಯಾಲಿ ನಡೆಸಿದರು. ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಿದರು.

ವಕೀಲ ಕಣ್ಣನ್‌ ಅವರ ಮೇಲೆ ಗುಮಾಸ್ತ ಆನಂದ ಎಂಬಾತ ಹಾಡಹಗಲೇ ಕುಡುಗೋಲಿನಿಂದ ಹಲ್ಲೆ ನಡೆಸಿದ್ದರಿಂದ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ. ಈ ಘಟನೆಯನ್ನು ವಕೀಲರ ಸಂಘ ತೀವ್ರವಾಗಿ ಖಂಡಿಸುತ್ತದೆ. ಕೃತ್ಯ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿದರು.

ADVERTISEMENT

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶಿವಶರಣಪ್ಪ ಎಮ್‌. ಪಾಟೀಲ, ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಿ. ಬಿರಾದಾರ, ಉಪಾಧ್ಯಕ್ಷ ಗುಂಡರೆಡ್ಡಿ ಗುಡಾಡಿ, ಜಂಟಿ ಕಾರ್ಯದರ್ಶಿ ಶಿಲ್ಪಾ ಪಾಟೀಲ, ಖಜಾಂಚಿ ಪ್ಯಾರು ಸಾಬ್‌ ಎಂ. ಶೇಕ್‌ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.