ADVERTISEMENT

ಕುಷ್ಠರೋಗ ನಿರ್ಮೂಲನಾ: ಭಿತ್ತಿಪತ್ರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2019, 16:23 IST
Last Updated 20 ನವೆಂಬರ್ 2019, 16:23 IST
ಬೀದರ್‌ನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಭಿತ್ತಿಪತ್ರ ಹಾಗೂ ಕರಪತ್ರಗಳನ್ನು ಬಿಡುಗಡೆಗೊಳಿಸಿದರು. ಸೂರ್ಯಕಾಂತ ಎಸ್, ವೀರಣ್ಣ ರೆಡ್ಡಿ, ಡಾ.ರಾಜಶೇಖರ ಪಾಟೀಲ ಇದ್ದರು
ಬೀದರ್‌ನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಭಿತ್ತಿಪತ್ರ ಹಾಗೂ ಕರಪತ್ರಗಳನ್ನು ಬಿಡುಗಡೆಗೊಳಿಸಿದರು. ಸೂರ್ಯಕಾಂತ ಎಸ್, ವೀರಣ್ಣ ರೆಡ್ಡಿ, ಡಾ.ರಾಜಶೇಖರ ಪಾಟೀಲ ಇದ್ದರು   

ಬೀದರ್‌: ಜಿಲ್ಲೆಯಲ್ಲಿ ನವೆಂಬರ್ 25 ರಿಂದ ಡಿಸೆಂಬರ್‌ 10 ರವರೆಗೆ ನಡೆಯಲಿರುವ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಭಿತ್ತಿಪತ್ರ ಹಾಗೂ ಕರಪತ್ರಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ನಗರದಲ್ಲಿ ಈಚೆಗೆ ಬಿಡುಗಡೆ ಮಾಡಿದರು.

‘ಆರೋಗ್ಯ ಇಲಾಖೆಯ ಸಿಬ್ಬಂದಿ ಗ್ರಾಮ ಪಂಚಾಯಿತಿಯಿಂದ ಜಿಲ್ಲಾ ಮಟ್ಟದವರೆಗಿನ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಮಕ್ಕಳೊಂದಿಗೆ ರ‍್ಯಾಲಿ ನಡೆಸಿ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಬೇಕು’ ಎಂದು ಗಂಗ್ವಾರ್‌ ತಿಳಿಸಿದರು.

ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ.ರಾಜಶೇಖರ ಪಾಟೀಲ ಮಾತನಾಡಿ,‘ಕುಷ್ಠರೋಗ ಪತ್ತೆ ಹಚ್ಚುವ ಕಾರ್ಯಕ್ರಮದಲ್ಲಿ ಮಹಿಳೆ ಹಾಗೂ ಪುರುಷರ ತಂಡಗಳು ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಲಿವೆ. ಪ್ರತಿದಿನ ಗ್ರಾಮೀಣ ಭಾಗದಲ್ಲಿ ಇಪ್ಪತ್ತು ಮನೆಗಳು ಹಾಗೂ ನಗರ ಪ್ರದೇಶಗಳಲ್ಲಿ ಇಪ್ಪತ್ತೈದು ಮನೆಗಳಿಗೆ ಭೇಟಿ ನೀಡಲಿವೆ. ಪ್ರತಿ ಐದು ತಂಡಕ್ಕೆ ಒಬ್ಬರು ಮೇಲ್ವಿಚಾರಕರನ್ನು ನೇಮಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

‘ಯಾವುದಾದರೂ ವ್ಯಕ್ತಿಯಲ್ಲಿ ರೋಗ ಕಂಡುಬಂದರೆ ಅವರಿಗೆ ಧೈರ್ಯ ಹೇಳಿ ಬಹು ಔಷಧಿ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಬಹುದು ಎನ್ನುವ ಮಾಹಿತಿ ಹಂಚಿಕೊಳ್ಳಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೂರ್ಯಕಾಂತ ಎಸ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೀರಣ್ಣ ರೆಡ್ಡಿ ಇದ್ದರು. ರಮೇಶ ಸ್ವಾಗತಿಸಿದರು. ಜಿಲ್ಲಾ ಕುಷ್ಠರೋಗ ಕಾರ್ಯಕ್ರಮದ ಮೇಲ್ವಿಚಾರಕ ವೀರಶೆಟ್ಟಿ ಚನಶೆಟ್ಟಿ ನಿರೂಪಿಸಿದರು. ಇಮಾನವೆಲ್‌ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.