ADVERTISEMENT

‘ಮಹಿಳೆಯರು ಸಾಧನೆಗೆ ಪ್ರಯತ್ನಿಸಲಿ’: ಕವಿತಾ ಮಿಶ್ರಾ ಸಲಹೆ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ:

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2024, 16:32 IST
Last Updated 1 ಮಾರ್ಚ್ 2024, 16:32 IST
ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಗುರುನಾನಕ ಶಿಕ್ಷಣ ಸಂಸ್ಥೆಗಳ ಸಮೂಹದ ಉಪಾಧ್ಯಕ್ಷೆ ರೇಷ್ಮಾ ಕೌರ್ ಹಾಗೂ ವಿದ್ಯಾಚೇತನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗವೇಣಿ ಶಂಕರ ಅವರಿಗೆ ಸ್ತ್ರೀ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು
ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಗುರುನಾನಕ ಶಿಕ್ಷಣ ಸಂಸ್ಥೆಗಳ ಸಮೂಹದ ಉಪಾಧ್ಯಕ್ಷೆ ರೇಷ್ಮಾ ಕೌರ್ ಹಾಗೂ ವಿದ್ಯಾಚೇತನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗವೇಣಿ ಶಂಕರ ಅವರಿಗೆ ಸ್ತ್ರೀ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು   

ಪ್ರಜಾವಾಣಿ ವಾರ್ತೆ

ಜನವಾಡ(ಬೀದರ್ ತಾಲ್ಲೂಕು): ಮಹಿಳೆಯರು ಜೀವನದಲ್ಲಿ ಏನನ್ನಾದರೂ ಸಾಧಿಸಲು ಪ್ರಯತ್ನಿಸಬೇಕು ಎಂದು ಪ್ರಗತಿ ಪರ ರೈತ ಮಹಿಳೆ ಕವಿತಾ ಮಿಶ್ರಾ ಹೇಳಿದರು.

ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ಮಹಿಳೆಯಲ್ಲೂ ವಿಶೇಷ ಸಾಮರ್ಥ್ಯ ಇದೆ. ಅದನ್ನು ಬಳಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕಿ ಡಾ. ಉಮಾ ದೇಶಮುಖ ಮಾತನಾಡಿ, ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಪಾಲಕರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಹೇಳಿದರು.

ಪ್ರಾಚಾರ್ಯೆ ವಿನಿತಾ ಪಾಟೀಲ ಮಾತನಾಡಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶರಣಬಸವಪ್ಪ ಅಪ್ಪ ಹಾಗೂ ಮಾತೆ ದಾಕ್ಷಾಯಿಣಿ ಅವರ ಮಾರ್ಗದರ್ಶನದಲ್ಲಿ ಸಂಘ ಮಹಿಳಾ ಶಿಕ್ಷಣಕ್ಕೆ ಉತ್ತೇಜನ ಕೊಡುತ್ತಿದೆ. ಮಹಿಳೆಯರಿಗೆ ಸಾಧನೆಗೆ ಪ್ರೇರಣೆ ನೀಡುತ್ತಿದೆ ಎಂದರು.

ಗುರುನಾನಕ ಶಿಕ್ಷಣ ಸಂಸ್ಥೆಗಳ ಸಮೂಹದ ಉಪಾಧ್ಯಕ್ಷೆ ರೇಷ್ಮಾ ಕೌರ್ ಹಾಗೂ ಕೊಳಾರ(ಕೆ) ಗ್ರಾಮದ ವಿದ್ಯಾಚೇತನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗವೇಣಿ ಶಂಕರ ಅವರಿಗೆ ಸ್ತ್ರೀ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗಾಯಕಿ ಶಿವಾನಿ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
ಸಹನಾ ಪಾಟೀಲ, ಪ್ರೊ. ಗೀತಾಂಜಲಿ, ಪ್ರೊ. ರಜಿಯಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.