ಔರಾದ್: ಸ್ವಯಂ ಉದ್ಯೋಗ ಮಾಡ ಬಯಸುವ ಗ್ರಾಮೀಣ ಭಾಗದ ಮಹಿಳೆಯರಿಗೆ ಶ್ಯೂರಿಟಿ ಇಲ್ಲದೆ ಸಾಲ ನೀಡುವ ವ್ಯವಸ್ಥೆ ಇದೆ ಎಂದು ಬ್ಯಾಂಕ್ ಆಫ್ ಬರೋಡಾದ ಅಧಿಕಾರಿ ಪ್ರಿಯಾಂಕಾ ಹೇಳಿದರು.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ತಾಲ್ಲೂಕಿನ ಸಂತಪುರನಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ವಸಹಾಯ ಗುಂಪಿನ ಪ್ರತಿನಿಧಿಗಳ ಸಮಾವೇಶದಲ್ಲಿ ಮಾತನಾಡಿದರು.
ಹೈನುಗಾರಿಕೆ ಹಾಗೂ ಇತರೆ ಸ್ವಯಂ ಉದ್ಯೋಗ ಮಾಡುವ ಮಹಿಳೆಯರಿಗೆ ಸರ್ಕಾರ ಹಾಗೂ ಬ್ಯಾಂಕ್‌ಗಳು ಸೌಲಭ್ಯ ನೀಡಲು ಹಿಂದೆ ಮುಂದೆ ನೋಡುವುದಿಲ್ಲ. ಹೀಗಾಗಿ ನೀವು ನೇರವಾಗಿ ಬ್ಯಾಂಕ್ ಸಂಪರ್ಕಿಸಿ ಆರ್ಥಿಕ ನೆರವು ಪಡೆದುಕೊಳ್ಳಬಹುದಾಗಿದೆ ಎಂದು ಸಲಹೆ ನೀಡಿದರು.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಯೋಜನಾ ನಿರ್ದೇಶಕ ಪ್ರವೀಣಕುಮಾರ ಮಾತನಾಡಿ, ನಾವು ಗ್ರಾಮೀಣ ಭಾಗದ ರೈತ, ಮಹಿಳೆ ಹಾಗೂ ವಿದ್ಯಾರ್ಥಿ ಹಿತದೃಷ್ಟಿಯಿಂದ ಯೋಜನೆ ರೂಪಿಸಿ ಜಾರಿಗೆ ತರುತ್ತಿದ್ದೇವೆ. ಅರ್ಹ ಪ್ರತಿ ಫಲಾನುಭವಿಗಳಿಗೆ ಯೋಜನೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ಮುಖಂಡ ರಾಮಶೆಟ್ಟಿ ಪನ್ನಾಳೆ ಸಮಾವೇಶ ಉದ್ಘಾಟಿಸಿ, ಈ ತಾಲ್ಲೂಕಿನಲ್ಲಿ ಧರ್ಮಸ್ಥಳದಿಂದ ಅನೇಕ ಜನಪರ ಕೆಲಸ ಆಗುತ್ತಿವೆ. ಈ ಸಂಸ್ಥೆ ನೆರವು ಪಡೆದು ಅನೇಕ ಕುಟುಂಬಗಳು ಆರ್ಥಿಕವಾಗಿ ಬಲವಾಗಿವೆ ಎಂದರು.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ತಾಲ್ಲೂಕು ಯೋಜನಾಧಿಕಾರಿ ರಾಘವೇಂದ್ರ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಶಾಲಿವಾನ ಉದಗಿರೆ, ಔರಾದ್ ಎಸ್‌ಬಿಐ ವ್ಯವಸ್ಥಾಕ ಮಹಮ್ಮದ್ ಅಮೀರ್, ಮಲ್ಲಪ್ಪ ಗೌಡ, ಸುನೀಲ, ಉಮೇಶ, ಮಲ್ಲಿಕಾರ್ಜುನ, ಲೋಕೇಶ, ಬೀರಪ್ಪ, ಅನೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.