ADVERTISEMENT

ಕಾಂಗ್ರೆಸ್ ಸರ್ಕಾರದ ಸಾಧನೆ ಜನರಿಗೆ ತಿಳಿಸಿ: ಸಾಗರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2024, 15:20 IST
Last Updated 29 ಮಾರ್ಚ್ 2024, 15:20 IST
ಚಿತ್ರ ಭಾಲ್ಕಿ ತಾಲ್ಲೂಕಿನ ಡೋಣಗಾಪೂರ ಗ್ರಾಮದಲ್ಲಿ ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಮತಯಾಚನೆ ಮಾಡಿದರು
ಚಿತ್ರ ಭಾಲ್ಕಿ ತಾಲ್ಲೂಕಿನ ಡೋಣಗಾಪೂರ ಗ್ರಾಮದಲ್ಲಿ ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಮತಯಾಚನೆ ಮಾಡಿದರು   

ಭಾಲ್ಕಿ: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಭೇಟಿ ನೀಡಿ ಪ್ರಚಾರ ನಡೆಸಿದರು.

ತಾಲ್ಲೂಕಿನ ಡೋಣಗಾಪುರ, ಬೀರಿ(ಬಿ), ಅಂಬೇಸಾಂಗವಿ ಗ್ರಾ.ಪಂಗಳಿಗೆ ಶುಕ್ರವಾರ ಭೇಟಿ ನೀಡಿ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದ ಬಡ ಜನರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಜನರಿಗೆ ತಿಳಿಸಬೇಕು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದರು.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕಾಂಗ್ರೆಸ್ ಸರ್ಕಾರ ಬಡವರ, ದುರ್ಬಲ ವರ್ಗದವರ ಪರವಾಗಿದೆ. ಕಾರ್ಯಕರ್ತರು ವಿರೋಧ ಪಕ್ಷದವರ ಮಾತಿಗೆ ತಲೆ ಕೆಡಸಿಕೊಳ್ಳದೇ ಮನೆ ಮನೆಗೂ ಭೇಟಿ ನೀಡಿ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಬೇಕು ಎಂದು ತಿಳಿಸಿದರು.

ADVERTISEMENT

ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ ಚವ್ಹಾಣ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.