ADVERTISEMENT

ಮೋದಿ ಮತ್ತೆ ಪ್ರಧಾನಿಯಾದರೆ ಭಾರತ ವಿಶ್ವಗುರು: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2024, 16:14 IST
Last Updated 30 ಏಪ್ರಿಲ್ 2024, 16:14 IST
ಬೀದರ್ ತಾಲ್ಲೂಕಿನ ರಾಜಗೀರಾದಲ್ಲಿ ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ನಡೆದ ಪ್ರಚಾರ ಸಭೆಯಲ್ಲಿ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿದರು
ಬೀದರ್ ತಾಲ್ಲೂಕಿನ ರಾಜಗೀರಾದಲ್ಲಿ ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ನಡೆದ ಪ್ರಚಾರ ಸಭೆಯಲ್ಲಿ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿದರು   

ಜನವಾಡ: ‘ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ಭಾರತ ವಿಶ್ವಗುರು ಆಗಲಿದೆ’ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

ಬೀದರ್ ತಾಲ್ಲೂಕಿನ ಮರಕುಂದಾ, ಬಾಪುರ, ಭಂಗೂರ, ಸಿಂದೋಲ್, ರಾಜಗೀರಾ, ಹೊಕ್ರಾಣ(ಕೆ), ಹೊಕ್ರಾಣ (ಬಿ), ಮೊಗದಾಳ ಗ್ರಾಮಗಳಲ್ಲಿ ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ಪಾದಯಾತ್ರೆ ಹಾಗೂ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ದೇಶದ ಸಮಗ್ರ ಅಭಿವೃದ್ಧಿ, ಸುರಕ್ಷತೆಗಾಗಿ ಮೋದಿ ಅವರ ನಾಯಕತ್ವದ ಅವಶ್ಯಕತೆ ಇದೆ. ಹಿಂದೆ ಪ್ರಧಾನಿ ಆದವರು ಬೇರೆ ಬೇರೆ ದೇಶಕ್ಕೆ ಹೋದಾಗ ಅವರಿಗೆ ದ್ವಿತೀಯ ದರ್ಜೆಯ ಗೌರವ ಕೊಡಲಾಗುತ್ತಿತ್ತು. ಮೋದಿ ಅವರಿಗೆ ಕೆಂಪು ಕಂಬಳಿಯ ಪ್ರಥಮ ದರ್ಜೆಯ ಗೌರವ ಕೊಡಲಾಗುತ್ತಿದೆ. ಮೋದಿ ಅವರ ಕಾರ್ಯವೈಖರಿಯೇ ಇದಕ್ಕೆ ಸಾಕ್ಷಿ’ ಎಂದರು.

ADVERTISEMENT

‘ಭಗವಂತ ಖೂಬಾ ಅವರು ಜಿಲ್ಲೆಯ ಅಭಿವೃದ್ಧಿಗೆ ಬಹಳಷ್ಟು ಶ್ರಮಿಸಿದ್ದಾರೆ. ಈ ಬಾರಿಯೂ ಅವರ ಗೆಲುವು ನಿಶ್ಚಿತ’ ಎಂದು ತಿಳಿಸಿದರು.

ಪಕ್ಷದ ಬೀದರ್ ದಕ್ಷಿಣ ಮಂಡಲ ಅಧ್ಯಕ್ಷ ರಾಜರೆಡ್ಡಿ ಶಹಾಬಾದ್, ಪ್ರಧಾನ ಕಾರ್ಯದರ್ಶಿ ಚಂದ್ರಯ್ಯ ಸ್ವಾಮಿ, ಮುಖಂಡರಾದ ಸುರೇಶ ಮಾಶೆಟ್ಟಿ, ಮಾಣಿಕಪ್ಪ ಕಾಶೆಂಪುರ, ಘಾಳೆಪ್ಪ ಚಟ್ನಳ್ಳಿ, ಶಿವಕುಮಾರ ಸ್ವಾಮಿ, ರವಿ ಮಾಸಿಮಾಡೆ, ಪ್ರಶಾಂತ ಸಿಂದೋಲ್ ಮೊದಲಾದವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.