ADVERTISEMENT

ಕಟೀಲ್ ಮನೆಗೆ ಖೂಬಾ ಭೇಟಿ

​ಪ್ರಜಾವಾಣಿ ವಾರ್ತೆ
Published 21 ಜುಲೈ 2021, 15:15 IST
Last Updated 21 ಜುಲೈ 2021, 15:15 IST
ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ನವದೆಹಲಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ಅವರನ್ನು ಸನ್ಮಾನಿಸಿದರು
ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ನವದೆಹಲಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ಅವರನ್ನು ಸನ್ಮಾನಿಸಿದರು   

ಬೀದರ್: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಮೂಲ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ಅವರ ನವದೆಹಲಿಯ ನಿವಾಸಕ್ಕೆ ಬುಧವಾರ ಭೇಟಿ ನೀಡಿದರು.

ಕಟೀಲ್ ಅವರಿಗೆ ಹಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಗೌರವಿಸಿದರು.

ತಮಗೆ ಸಚಿವ ಸ್ಥಾನ ಲಭಿಸಿದ್ದಕ್ಕೆ ರಾಜ್ಯ ಅದರಲ್ಲೂ ಕಲ್ಯಾಣ ಕರ್ನಾಟಕದ ಜನತೆಗೆ ಬಹಳ ಸಂತಸವಾಗಿದೆ. ದೊರೆತ ಅವಕಾಶ ಬಳಸಿಕೊಂಡು, ದೇಶ, ರಾಜ್ಯ ಹಾಗೂ ಬೀದರ್ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ ಎಂದು ಕಟೀಲ್, ಖೂಬಾ ಅವರಿಗೆ ಸಲಹೆ ಮಾಡಿದರು.

ADVERTISEMENT

ಕೇಂದ್ರ ರಸಗೊಬ್ಬರ ಸಚಿವರಿಗೆ ಸನ್ಮಾನ


ಬೀದರ್: ನವದೆಹಲಿಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಮೂಲ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರನ್ನು ಜಿಲ್ಲೆಯ ಜನಪ್ರತಿನಿಧಿಗಳು ಬುಧವಾರ ಸನ್ಮಾನಿಸಿದರು.


ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ ಹಾಗೂ ಚಂದ್ರಶೇಖರ ಪಾಟೀಲ ಅವರು ಪುಷ್ಪಗುಚ್ಛ ನೀಡಿ ಶುಭ ಕೋರಿದರು.


ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರದಿಂದ ಎಲ್ಲ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯ ಪ್ರಗತಿಗೆ ಎಲ್ಲರೂ ಒಂದಾಗಿ ಶ್ರಮಿಸೋಣ. ನಿಮ್ಮ ಕ್ಷೇತ್ರದಲ್ಲಿ ಏನೇ ಅಭಿವೃದ್ಧಿ ಕೆಲಸಗಳಾಗಬೇಕಿದ್ದಲ್ಲಿ ಅಗತ್ಯ ಪ್ರಸ್ತಾವ ಸಿದ್ಧಪಡಿಸಿ ಗಮನಕ್ಕೆ ತನ್ನಿ. ನಾನು ಎಲ್ಲ ಸಹಕಾರ ನೀಡಲು ಸಿದ್ಧನಿದ್ದೇನೆ ಎಂದು ಖೂಬಾ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.