ADVERTISEMENT

ಬೀದರ್‌: ‘ಮಾನಸಿಕ ಆರೋಗ್ಯದ ಅರಿವು ಅಗತ್ಯ’

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2023, 15:58 IST
Last Updated 14 ಅಕ್ಟೋಬರ್ 2023, 15:58 IST
ಬೀದರ್‌ನಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು  ಬ್ರಿಮ್ಸ್  ಮನೋರೋಗ ವಿಭಾಗದ ಮುಖ್ಯಸ್ಥೆ ಡಾ. ಶ್ವೇತಾ ಕುಣಕೇರಿ ಸಸಿಗೆ ನೀರೆರೆದು ಉದ್ಘಾಟಿಸಿದರು
ಬೀದರ್‌ನಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು  ಬ್ರಿಮ್ಸ್  ಮನೋರೋಗ ವಿಭಾಗದ ಮುಖ್ಯಸ್ಥೆ ಡಾ. ಶ್ವೇತಾ ಕುಣಕೇರಿ ಸಸಿಗೆ ನೀರೆರೆದು ಉದ್ಘಾಟಿಸಿದರು   

ಬೀದರ್‌: ‘ಇಂದಿನ ಯುವಸಮುದಾಯಕ್ಕೆ ಮಾನಸಿಕ ಆರೋಗ್ಯದ ಅರಿವು ಅಗತ್ಯ’ ಎಂದು ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ಮನೋರೋಗ ವಿಭಾಗದ ಮುಖ್ಯಸ್ಥೆ ಡಾ. ಶ್ವೇತಾ ಕುಣಕೇರಿ ಹೇಳಿದರು.

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಅದು 2023ನೇ ಸಾಲಿನ ಘೋಷವಾಕ್ಯ ಕೂಡ ಹೌದು. ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನವರಿಗೆ ತಿಳಿವಳಿಕೆ ಇಲ್ಲ. ಅದರ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಬ್ರಿಮ್ಸ್‌ ಉತ್ತಮ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ ಬಿರಾದಾರ ಮಾತನಾಡಿ, ಮನುಷ್ಯ ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯವಂತನಾಗಿರಬೇಕು. ಮಾನಸಿಕ ರೋಗಿಗಳನ್ನು ಗುರುತಿಸಿ ಉತ್ತಮ ಚಿಕಿತ್ಸೆ, ಪುನರ್ವಸತಿ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು.

ADVERTISEMENT

ಡಾ. ಸುನೀಲ್ ತಾಪ್ಸೆ ಕಾರ್ಯಕ್ರಮ ಉದ್ಘಾಟಿಸಿದರು. ಡಾ. ರಾಘವೇಂದ್ರ ವಾಘೋಲೆ, ಡಾ. ಶ್ವೇತಾ ಪಾಟೀಲ, ಜಿಲ್ಲಾ ಅಂಗವಿಕಲ ಮತ್ತು ಹಿರಿಯ ನಾಗರಿಕರ ಕಲ್ಯಾಣ ಅಧಿಕಾರಿ ನಾಗರಾಜ ಮಠ,  ಡಾ. ಪೂರ್ಣಿಮಾ, ಡಾ. ಬಾಬುರಾವ, ಡಾ. ಪ್ರೀತಂ, ಡಾ. ಶಿವಕುಮಾರ ಸಂಗನ. ಡಾ. ಮಲ್ಲಿಕಾರ್ಜುನ, ಡಾ. ರಾಜೇಶ, ಡಾ. ಶಾಲಿನಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.