ADVERTISEMENT

ಬೀದರ್‌ | ಸರ್ಕಾರಿ ಶಾಲೆಗೆ ಸಚಿವ ಈಶ್ವರ ಖಂಡ್ರೆ ಭೇಟಿ

​ಪ್ರಜಾವಾಣಿ ವಾರ್ತೆ
Published 4 ಜನವರಿ 2024, 5:05 IST
Last Updated 4 ಜನವರಿ 2024, 5:05 IST
<div class="paragraphs"><p>ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಬೀದರ್‌ನ ಓಲ್ಡ್‌ ಸಿಟಿಯಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಬುಧವಾರ ಭೇಟಿ ಕುಸಿದು ಬಿದ್ದಿರುವ ಮೇಲ್ಛಾವಣಿ ಪರಿಶೀಲಿಸಿದರು</p></div>

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಬೀದರ್‌ನ ಓಲ್ಡ್‌ ಸಿಟಿಯಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಬುಧವಾರ ಭೇಟಿ ಕುಸಿದು ಬಿದ್ದಿರುವ ಮೇಲ್ಛಾವಣಿ ಪರಿಶೀಲಿಸಿದರು

   

ಬೀದರ್‌: ನಗರದ ಓಲ್ಡ್‌ ಸಿಟಿಯಲ್ಲಿರುವ ಸರ್ಕಾರಿ ಜೂನಿಯರ್ ಬಾಲಕ ಮತ್ತು ಬಾಲಕಿಯರ ಪ್ರೌಢ ಶಾಲೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿಥಿಲಗೊಂಡ ಶಾಲೆಯ ಕೊಠಡಿಗಳು, ಕುಸಿದು ಬಿದ್ದ ಚಾವಣಿ ಪರಿಶೀಲಿಸಿದರು. ವಿದ್ಯಾರ್ಥಿಗಳು, ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು.

ADVERTISEMENT

ಬಳಿಕ ಮಾತನಾಡಿದ ಅವರು, ‘ಪ್ರೌಢಶಾಲೆ ಅಭಿವೃದ್ಧಿಗೆ ಈಗಾಗಲೇ ಈ ಹಿಂದೆ ₹2 ಕೋಟಿ ಅನುದಾನ ನೀಡಿದ್ದೇನೆ. ಈ ಅನುದಾನ ಅಗತ್ಯ ಶಾಲಾ ಕೋಣೆ ನಿರ್ಮಾಣ ಮತ್ತು ಸೌಲಭ್ಯ ಕಲ್ಪಿಸಲು ಸಾಲುತ್ತಿಲ್ಲ. ಶಾಲೆಗೆ ಇನ್ನೂ ಹೆಚ್ಚುವರಿಯಾಗಿ ₹2 ಕೋಟಿ ಅನುದಾನ ಮಂಜೂರು ಮಾಡಿಸಿದ್ದೇನೆ’ ಎಂದು ಹೇಳಿದರು.

ಪೌರಾಡಳಿತ ಸಚಿವ ರಹೀಂ ಖಾನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ದಿಲೀಪ ಬದೋಲೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.