ADVERTISEMENT

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಹುಮನಾಬಾದ್ ತಾಲ್ಲೂಕಿನಲ್ಲಿ ಶೇ 70.55 ಮತದಾನ

​ಪ್ರಜಾವಾಣಿ ವಾರ್ತೆ
Published 3 ಜೂನ್ 2024, 16:05 IST
Last Updated 3 ಜೂನ್ 2024, 16:05 IST
ಹುಮನಾಬಾದ್ ಪಟ್ಟಣದಲ್ಲಿ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಅವರು ತಮ್ಮ ಬೆಂಬಲಿಗರೊಂದಿಗೆ ಮತ ಚಲಾಯಿಸಿದರು
ಹುಮನಾಬಾದ್ ಪಟ್ಟಣದಲ್ಲಿ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಅವರು ತಮ್ಮ ಬೆಂಬಲಿಗರೊಂದಿಗೆ ಮತ ಚಲಾಯಿಸಿದರು   

ಹುಮನಾಬಾದ್: ಈಶಾನ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಸ್ಥಾನದ ಆಯ್ಕೆಗೆ ಸೋಮವಾರ ನಡೆದ ಚುನಾವಣೆಯಲ್ಲಿ ತಾಲ್ಲೂಕಿನಲ್ಲಿ ಶೇ 70.55ರಷ್ಟು ಮತದಾನವಾಗಿದೆ.

ಪದವೀಧರ ಮತದಾರರ ಪಟ್ಟಿಯಲ್ಲಿರುವ ತಾಲ್ಲೂಕಿನ ಒಟ್ಟು 4,667ಮತದಾರರ ಪೈಕಿ 3,293 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಚುನಾವಣೆಗಾಗಿ ತಾಲ್ಲೂಕಿನಲ್ಲಿ ಒಟ್ಟು 4 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಹುಮನಾಬಾದ್ ಪಟ್ಟಣದ ತಹಶೀಲ್ ಕಚೇರಿ ಹಾಗೂ ತಾಲ್ಲೂಕಿನ ಹಳಿಖೇಡ್ ಬಿ. ಪಟ್ಟಣದಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಗಳಲ್ಲಿ ಮತದಾರರು ಮತ ಚಲಾಯಿಸಿದರು.

ಈಶಾನ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಇಲ್ಲಿಯ ಕಚೇರಿಯಲ್ಲಿ ತಮ್ಮ ಮತ ಚಲಾಯಿಸಿದರು. ಶಾಸಕ ಡಾ. ಸಿದ್ಧಲಿಂಗಪ್ಪ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಮಾಜಿ ಶಾಸಕ ಸುಭಾಷ ಕಲ್ಲೂರ್, ಶಿವಾನಂದ ಮಂಠಾಳಕರ್, ಪುರಸಭೆ ಸದಸ್ಯ ರಮೇಶ ಕಲ್ಲೂರ್ ಅವರು ತಮ್ಮ ಮತ ಚಲಾಯಿಸಿದರು.

ADVERTISEMENT
ಹುಮನಾಬಾದ್ ಪಟ್ಟಣದ ತಹಶೀಲ್ ಕಚೇರಿಯ ಮತಗಟ್ಟೆಯಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ತೆರಳಿ ಮತ ಚಲಾಯಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.