ADVERTISEMENT

ನರೇಗಾ ನಡಿಗೆ ಸಬಲತೆಯೆಡೆಗೆ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2024, 14:32 IST
Last Updated 29 ಅಕ್ಟೋಬರ್ 2024, 14:32 IST
ಔರಾದ್ ತಾಲ್ಲೂಕಿನ ಧುಪತಮಹಾಗಾಂವ್ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ನಡೆಯಿತು
ಔರಾದ್ ತಾಲ್ಲೂಕಿನ ಧುಪತಮಹಾಗಾಂವ್ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ನಡೆಯಿತು   

ಔರಾದ್: ‘ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಕುಟುಂವೊಂದಕ್ಕೆ ವರ್ಷದಲ್ಲಿ 100 ದಿನಗಳ ಖಾತರಿ ಕೆಲಸದ ಜತೆಗೆ ಗಂಡು ಹೆಣ್ಣಿಗೆ ಸಮಾನವಾಗಿ ಪ್ರತಿ ದಿನಕ್ಕೆ ₹349 ಕೂಲಿ ನೀಡಲಾಗುವುದು’ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಹೇಳಿದರು.

ತಾಲ್ಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಉದ್ಯೋಗ ಖಾತರಿ ಯೋಜನೆ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ಹಾಗೂ ಕ್ರಿಯಾಯೋಜನೆ ಸಿದ್ಧಪಡಿಸಲಾಗುತ್ತಿದೆ’ ಎಂದು ತಿಳಿಸಿದ ಅವರು, ಸರ್ಕಾರ ನಿಗದಿಪಡಿಸಿದ ಕೆಲಸದ ಅಳತೆ, ಒಂದು ದಿನದ ಕೂಲಿ, ಪಡೆಯಲು ಬೇಕಾದ ಕೆಲಸದ ಪ್ರಮಾಣ ಮತ್ತು ಕೆಲಸದ ಅವಧಿ, ಯೋಜನೆಯಡಿಯಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ADVERTISEMENT

ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿಬಾಯಿ ವಗ್ಗೆ, ಪಿಡಿಒ ಅನಿತಾ ರಾಠೋಡ್, ಬಸವರಾಜ ಮಡಿವಾಳ, ಟಿಸಿ ಆನಂದ, ವಿನೋದ ಪವಾರ್, ಗುಂಡಪ್ಪ ಪಾಟೀಲ, ಕಲ್ಲಪ್ಪ ವಗ್ಗೆ, ಚಂದ್ರಕಾಂತ ಸ್ವಾಮಿ, ಮಹೇಶ ಪವಾರ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.