ADVERTISEMENT

ಬೀದರ್‌ | ಲೋಕ ಅದಾಲತ್‌ನಲ್ಲಿ 17,476 ಪ್ರಕರಣ ಇತ್ಯರ್ಥ, ₹7.98 ಕೋಟಿ ಪರಿಹಾರ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2024, 15:45 IST
Last Updated 18 ಸೆಪ್ಟೆಂಬರ್ 2024, 15:45 IST
ಪ್ರಕಾಶ ಬನಸೋಡೆ
ಪ್ರಕಾಶ ಬನಸೋಡೆ   

ಬೀದರ್‌: ‘ಸೆ. 14ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 17,476 ಪ್ರಕರಣಗಳನ್ನು ಇತ್ಯರ್ಥಗೊಳಿಸಿದ್ದು, ₹7.98 ಕೋಟಿ ಪರಿಹಾರ ಕಕ್ಷಿದಾರರಿಗೆ ಒದಗಿಸಲಾಗಿದೆ’ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಎ.ಬನಸೋಡೆ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು ಪ್ರಕರಣಗಳಲ್ಲಿ 6,788 ಪೆಂಡಿಂಗ್‌ ಪ್ರಕರಣಗಳಿದ್ದವು. ಜಿಲ್ಲೆಯಾದ್ಯಂತ ಒಟ್ಟು 10,688 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ₹54.75 ಲಕ್ಷ ವಸೂಲಾತಿ ಮಾಡಿ ಪರಿಹಾರ ಒದಗಿಸಲಾಗಿದೆ ಎಂದು ವಿವರಿಸಿದರು.

ಬ್ಯಾಂಕ್‌ ವಸೂಲಾತಿ, ನಗರಸಭೆ, ಪುರಸಭೆ ಗ್ರಾಮ ಪಂಚಾಯಿತಿಗಳ ಆಸ್ತಿ ತೆರಿಗೆ, ಬಿ.ಎಸ್.ಎನ್.ಎಲ್, ಜೆಸ್ಕಾಂ ಬಾಕಿ ಬಿಲ್‌, ಟ್ರಾಫಿಕ್‌ ವಸೂಲಾತಿಗೆ ಸಂಬಂಧಿಸಿದ ಪ್ರಕರಣಗಳಾಗಿದ್ದವು. ಸಂಧಾನದ ಮೂಲಕ ಒಂದು ಜೋಡಿ ಪುನಃ ಒಂದಾಗಿದ್ದಾರೆ ಎಂದರು.

ADVERTISEMENT

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಜಗದೀಶ್ವರ ದೊರೆ, ಆಕಾಶ ಸಜ್ಜನ್‌, ನಾಗರಾಜ, ಪ್ರೀತಿ, ಈರಮ್ಮ, ಜೀವನ್‌ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.