ಭಾಲ್ಕಿ: ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಚಯದಲ್ಲಿ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ್ ಹುಸೇನ್ ಅವರು ವಿದ್ಯಾರ್ಥಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಿಸಿದರು.
ನಂತರ ಮಾತನಾಡಿದ ಮಜಹರ್ ಹುಸೇನ್, ‘ಪ್ರಧಾನಿ ಅವರ ಸಲಹೆಯಂತೆ ವಿದ್ಯಾರ್ಥಿಗಳು ಪರೀಕ್ಷೆಯನ್ನು ಒತ್ತಡ ರಹಿತವಾಗಿ ಎದುರಿಸಬೇಕು. ಉತ್ತಮ ಅಂಕ ಗಳಿಸಲು, ಯಶಸ್ವಿಯಾಗಿ ಪರೀಕ್ಷೆ ಬರೆಯಲು ಶಾಲೆ ಆರಂಭವಾದಾಗಿನಿಂದಲೇ ಉತ್ತಮ ತಯಾರಿ ಮಾಡಿಕೊಳ್ಳಬೇಕು. ಶಿಕ್ಷಣದೊಂದಿಗೆ ದೈಹಿಕ, ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಕ್ರೀಡಾ ಚಟುವಟಿಕೆ, ವ್ಯಾಯಾಮ ಸೇರಿದಂತೆ ದೈಹಿಕ ಕಸರತ್ತು ಮಾಡಬೇಕು’ ಎಂದರು.
‘ಯಾವುದೇ ಕಾರಣಕ್ಕೂ ಪಾಲಕರ ವಿಶ್ವಾಸಕ್ಕೆ ಧಕ್ಕೆ ಬರದಂತೆ ಆತ್ಮೀಯ ಬಾಂಧವ್ಯದ ಮೂಲಕ ಸ್ನೇಹಯುತ ಸಂಬಂಧ ಬೆಳೆಸಿಕೊಳ್ಳಬೇಕು. ಒಟ್ಟಿನಲ್ಲಿ ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಬೇಕು. ಇಷ್ಟವಾದ ಕೋರ್ಸ್ ಆಯ್ಕೆ ಮಾಡಿಕೊಂಡು ಉನ್ನತ ಸಾಧನೆ ತೋರಬೇಕು’ ಎಂದು ಸಲಹೆ ನೀಡಿದರು.
ಪರೀಕ್ಷಾ ಪರಿವೀಕ್ಷಕ ಅಶೋಕ ರಾಜೋಳೆ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ, ಮುಖ್ಯಶಿಕ್ಷಕ ಮಹೇಶ ಮಹಾರಾಜ್, ಎಸ್ಸೆಸ್ಸೆಲ್ಸಿ ಸಂಯೋಜಕ ಪ್ರವೀಣ ಖಂಡಾಳೆ, ಲಕ್ಷ್ಮಣ ಮೇತ್ರೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.