ADVERTISEMENT

ಜನವಾಡ ಪಿಡಿಒ ಅಮಾನತು

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2024, 5:03 IST
Last Updated 11 ಅಕ್ಟೋಬರ್ 2024, 5:03 IST
ಸವಿತಾ ಹಿರೇಮಠ
ಸವಿತಾ ಹಿರೇಮಠ   

ಬೀದರ್‌: ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಡಿಜಿಟಲ್‌ ಖಾತೆಗಳನ್ನು ವಿತರಿಸಿದ ಆರೋಪದ ಮೇರೆಗೆ ತಾಲ್ಲೂಕಿನ ಜನವಾಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸವಿತಾ ಹಿರೇಮಠ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್‌ ಬದೋಲೆ ಆದೇಶ ಹೊರಡಿಸಿದ್ದಾರೆ.

ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಚರ್ಚಿಸದೆ, ಅನುಮೋದನೆ ಪಡೆಯದೇ ಜನವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಭಾಗ್ಯವಂತಿ ಹೈಟೆಕ್‌ ಲೇಔಟ್‌ನಲ್ಲಿ ಸುಮಾರು 200 ಡಿಜಿಟಲ್‌ ಖಾತೆಗಳನ್ನು ವಿತರಿಸಿದ್ದಾರೆ. ಇದು ಸರ್ಕಾರದ ಮಾರ್ಗಸೂಚಿಗೆ ವಿರುದ್ಧವಾದುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT