ಬೀದರ್: ಹಾಸನ ಪೆನ್‌ಡ್ರೈವ್ ಪ್ರಕರಣದ ವಿರುದ್ಧ ಕರ್ನಾಟಕ ರಾಜ್ಯ ಜನಪರ ಚಳವಳಿಗಳ ಒಕ್ಕೂಟದ ಕಾರ್ಯಕರ್ತೆಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
‘ನಮ್ಮೆಲ್ಲರ ಹೋರಾಟದ ನಡಿಗೆ.. ಹಾಸನದ ಕಡೆಗೆ’ ಘೋಷಣೆಗಳನ್ನು ಕೂಗಿದರು. ಒಕ್ಕೂಟದ ಜಿಲ್ಲಾ ಸಮಿತಿ ಸಹ ಕಾರ್ಯದರ್ಶಿ ಸಾವಿತ್ರಿ ಮಾತನಾಡಿ, ಮೇ 30ರಂದು ಬೆಳಿಗ್ಗೆ 10.30ಕ್ಕೆ ಹಾಸನದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಒಕ್ಕೂಟದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.
ಅತ್ಯಾಚಾರದ ಆರೋಪ ಎದುರಿಸುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಅವರ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎನ್ನುವುದು ಪ್ರಮುಖ ಬೇಡಿಕೆಗಳಾಗಿವೆ. ಹಾಸನದಲ್ಲಿ ನಡೆದ ಘಟನೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಹೇಳಿದರು.
ಒಕ್ಕೂಟದ ತಾಲ್ಲೂಕು ಅಧ್ಯಕ್ಷೆ ಕಲಾವತಿ, ರೇಶ್ಮಾ ಹಂಸರಾಜ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.