ADVERTISEMENT

ಭಾಲ್ಕಿ | ಬಸ್ ಪಾಸ್ ವಿತರಿಸಲು ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2024, 15:12 IST
Last Updated 29 ಜೂನ್ 2024, 15:12 IST
ಭಾಲ್ಕಿಯಲ್ಲಿ ಎಬಿವಿಪಿ ಮುಖಂಡರು ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ಗ್ರೇಡ್-1 ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು
ಭಾಲ್ಕಿಯಲ್ಲಿ ಎಬಿವಿಪಿ ಮುಖಂಡರು ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ಗ್ರೇಡ್-1 ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು   

ಭಾಲ್ಕಿ: ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಣೆ ಮಾಡಬೇಕು. ಹಾಗೆಯೇ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಎಬಿವಿಪಿ ಮುಖಂಡರು ಪ್ರತಿಭಟನೆ ನಡೆಸಿದರು.

ನಗರದ ಶಿವಾಜಿ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ರ‍್ಯಾಲಿ ಮಾಡಿ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ನಂತರ ಮಾತನಾಡಿದ ಪ್ರಮುಖರು, ‘ರಾಜ್ಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ನಗರ ಪ್ರದೇಶಗಳ ಶಾಲೆ, ಕಾಲೇಜುಗಳಿಗೆ ಬರುತ್ತಾರೆ. ವಿದ್ಯಾರ್ಥಿಗಳ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಪಾಸ್ ಅನ್ನು ವಿತರಣೆ ಮಾಡದೇ ಇರುವ ಕಾರಣ ಪ್ರತಿದಿನ ನೂರಾರು ರೂಪಾಯಿ ಖರ್ಚು ಮಾಡಿಕೊಂಡು ಬಡ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುವುದು ಕಷ್ಟದ ಸಂಗತಿ ಆಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಸರ್ಕಾರ ಶಾಲೆ, ಕಾಲೇಜುಗಳು ಪ್ರಾರಂಭವಾದ ತಕ್ಷಣವೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಒದಗಿಸುವ ನಿಟ್ಟಿನಲ್ಲಿ ಹೆಚ್ಚು ಸಿಬ್ಬಂದಿಯನ್ನು ಬಳಸಿಕೊಂಡು ಬಸ್ ಪಾಸ್ ಒದಗಿಸಬೇಕು’ ಎಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೇಮಂತ ಪ್ರಮುಖರಾದ ಹಿರಿಯರಾದ ಈಶ್ವರ ರುಮ್ಮಾ, ಸಾಯಿಕಿರಣ, ಶಿವಕಾಂತ ಪಾಟೀಲ ಊರ್ಮಿಳ, ಸ್ವಾತಿ, ಭಾಗ್ಯಲಕ್ಷ್ಮಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.