ADVERTISEMENT

ಪಹಣಿ ದೋಷ ಸರಿಪಡಿಸಿ: ಅಖಿಲ ಭಾರತ ಕಿಸಾನ್ ಸಭಾ

ಅಖಿಲ ಭಾರತ ಕಿಸಾನ್ ಸಭಾದಿಂದ ಪ್ರತಿಭಟನಾ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 14:28 IST
Last Updated 15 ಫೆಬ್ರುವರಿ 2021, 14:28 IST
ರೈತರ ಪಹಣಿಗಳಲ್ಲಿನ ದೋಷಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾದ ಪದಾಧಿಕಾರಿಗಳು ಬೀದರ್‌ನಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು
ರೈತರ ಪಹಣಿಗಳಲ್ಲಿನ ದೋಷಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾದ ಪದಾಧಿಕಾರಿಗಳು ಬೀದರ್‌ನಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು   

ಬೀದರ್: ರೈತರ ಪಹಣಿಗಳಲ್ಲಿನ ದೋಷಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾದ ಬೀದರ್ ತಾಲ್ಲೂಕು ಘಟಕದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಜೆ ಫಾರಂ ಅನ್ವಯ ಆಸ್ತಿ ಹಕ್ಕು ಬದಲಾವಣೆ ಸಕಾಲದಲ್ಲಿ ಮಾಡಬೇಕು. ಬಹರ್ ಹುಕುಂ ಸಾಗುವಳಿ ಸಕ್ರಮಗೊಳಿಸಬೇಕು. ಅರ್ಧಕ್ಕೆ ನಿಂತಿರುವ ಫೋಡಿಮುಕ್ತ ಗ್ರಾಮ ಕೆಲಸ ಪೂರ್ಣಗೊಳಿಸಬೇಕು. ಶುಲ್ಕ ಕಟ್ಟಿದ ರೈತರ ಜಮೀನಿನ ಸರ್ವೇ ಕೂಡಲೇ ಮಾಡಬೇಕು ಒತ್ತಾಯಿಸಿದರು.

ADVERTISEMENT

ಸಭಾದ ಪದಾಧಿಕಾರಿಗಳು, ರೈತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.