ADVERTISEMENT

ರಸಪ್ರಶ್ನೆ ಸ್ಪರ್ಧೆ; ಜನಸೇವಾ ಶಾಲೆಗೆ ಬಹುಮಾನ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 4:40 IST
Last Updated 23 ಅಕ್ಟೋಬರ್ 2024, 4:40 IST
ಮಂಗಳೂರಿನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕದ ಪ್ರಾಂತಮಟ್ಟದ ಜ್ಞಾನ ವಿಜ್ಞಾನ ಮೇಳದ ಬಾಲ ವರ್ಗದ ವೇದಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಬೀದರ್‌ನ ಜನಸೇವಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು
ಮಂಗಳೂರಿನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕದ ಪ್ರಾಂತಮಟ್ಟದ ಜ್ಞಾನ ವಿಜ್ಞಾನ ಮೇಳದ ಬಾಲ ವರ್ಗದ ವೇದಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಬೀದರ್‌ನ ಜನಸೇವಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು   

ಬೀದರ್: ಮಂಗಳೂರಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ವಿದ್ಯಾಭಾರತಿ ಕರ್ನಾಟಕದ ಪ್ರಾಂತೀಯ ಹಾಗೂ ಕ್ಷೇತ್ರೀಯ ಮಟ್ಟದ ಜ್ಞಾನ ವಿಜ್ಞಾನ ಮೇಳದ ವೇದಗಣಿತ ಹಾಗೂ ಸಂಸ್ಕೃತ ಜ್ಞಾನ ರಸಪ್ರಶ್ನೆ ಸ್ಪರ್ಧೆಗಳಲ್ಲಿ ಇಲ್ಲಿಯ ಜನಸೇವಾ ಶಿಶು ಮಂದಿರ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 

ಎಂಟು ಜಿಲ್ಲೆಗಳ ಪ್ರಾಂತ ಮಟ್ಟದ ಮೇಳದ ಬಾಲ ವರ್ಗ, ಕಿಶೋರ ವರ್ಗದ ವೇದಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದರು. ಸಂಸ್ಕೃತ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಬಾಲ ವರ್ಗದಲ್ಲಿ ದ್ವಿತೀಯ ಹಾಗೂ ಕಿಶೋರ ವರ್ಗದಲ್ಲಿ ತೃತೀಯ ಸ್ಥಾನ ಪಡೆದರು.

ಕರ್ನಾಟಕ, ತೆಲಂಗಾಣ ಹಾಗೂ ಆಂಧ್ರ ಪ್ರದೇಶ ರಾಜ್ಯಗಳನ್ನು ಒಳಗೊಂಡ ಕ್ಷೇತ್ರೀಯ ಮಟ್ಟದ ಮೇಳದ ಬಾಲ ವರ್ಗದ ವೇದ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಹಾಂತೇಶ, ಮಹೇಶ್ವರಿ, ಪ್ರತೀಕರಾಜ ಅವರ ತಂಡ ದ್ವಿತೀಯ ಹಾಗೂ ಕಿಶೋರ ವರ್ಗದಲ್ಲಿ ಅಕ್ಷರಾ, ಆಕಾಶ, ಚರಣರಾಜ ತಂಡ ತೃತೀಯ ಸ್ಥಾನ ಗಳಿಸಿತು.

ADVERTISEMENT

ಶಾಲೆಯ ವಿದ್ಯಾರ್ಥಿಗಳು ಪ್ರಾಂತ ಹಾಗೂ ಕ್ಷೇತ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಸಾಧನೆಗೈದಿದ್ದಕ್ಕೆ ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಹಾಗೂ ಶಾಲೆಯ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.