ADVERTISEMENT

ಔರಾದ್ | ಅಂಗಡಿಗಳಿಗೆ ನುಗ್ಗಿದ ಮಳೆ ನೀರು: ಆಕ್ರೋಶ

​ಪ್ರಜಾವಾಣಿ ವಾರ್ತೆ
Published 13 ಜೂನ್ 2024, 14:31 IST
Last Updated 13 ಜೂನ್ 2024, 14:31 IST
ಬೀದರ್–ಔರಾದ್ ಹೆದ್ದಾರಿಯ ಬೋರಾಳ ಬಳಿ ಅಂಗಡಿಗಳಿಗೆ ಮಳೆ ನೀರು ನುಗ್ಗಿ ಹಾನಿಯಾಗಿದೆ
ಬೀದರ್–ಔರಾದ್ ಹೆದ್ದಾರಿಯ ಬೋರಾಳ ಬಳಿ ಅಂಗಡಿಗಳಿಗೆ ಮಳೆ ನೀರು ನುಗ್ಗಿ ಹಾನಿಯಾಗಿದೆ   

ಔರಾದ್: ಬುಧವಾರ ರಾತ್ರಿ ಸುರಿದ ಮಳೆಯಿಂದ ತಾಲ್ಲೂಕಿನ ಬೋರಾಳ ಗ್ರಾಮದ ಬಳಿಯ ಅಂಡಿಗಳಿಗೆ ನೀರು ನುಗ್ಗಿ ಹಾನಿಯಾಗಿದೆ.

ಬೋರಾಳ ಬಳಿ ಬೀದರ್-ಔರಾದ್ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಹೋಟೆಲ್, ಜೆರಾಕ್ಸ್ ಅಂಗಡಿ ಸೇರಿದಂತೆ ಐದಾರು ಅಂಗಡಿಗಳಲ್ಲಿ ನೀರು ನುಗ್ಗಿದೆ. ಇದರಿಂದ ಅಂಗಡಿಯಲ್ಲಿನ ಸಾಮಗ್ರಿಗಳು ನೀರು ಪಾಲಾಗಿವೆ. ಪಕ್ಕದ ಹೊಲಗಳಿಗೂ ನೀರು ನುಗ್ಗಿ ರೈತರಿಗೂ ಹಾನಿಯಾಗಿದೆ ಎಂದು ಬೋರಾಳ ಗ್ರಾಸ್ಥರು ಅಳಲು ತೋಡಿಕೊಂಡಿದ್ದಾರೆ.

ಬೀದರ್-ಔರಾದ್ ನಡುವಿನ ಹೆದ್ದಾರಿ ನಿರ್ಮಾಣ ಮಾಡುವ ಕಾಲಕ್ಕೆ ಬೋರಾಳ ಬಳಿ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಮಾಡಿಲ್ಲ. ಹೀಗಾಗಿ ಮೇಲಿನಿಂದ ಹರಿದು ಬಂದ ನೀರು ನೇರವಾಗಿ ಅಂಗಡಿಗಳಿಗೆ ನುಗ್ಗಿದೆ ಎಂದು ಉಮಾಕಾಂತ ಸೋನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಸರಿಯಾದ ಸರ್ವಿಸ್ ರಸ್ತೆ ಮಾಡದ ಕಾರಣ ಅವಘಡಗಳು ಸಂಭವಿಸುತ್ತಿವೆ. ಈ ವಿಷಯ ಸಂಬಂಧಿತ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಮುಂದೆ ಹೀಗಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.