ADVERTISEMENT

ಸನಾತನ ಸಂಸ್ಕೃತಿ ಶ್ರೇಷ್ಠವಾದುದು: ರಮೇಶ ಕುಲಕರ್ಣಿ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2024, 2:37 IST
Last Updated 23 ನವೆಂಬರ್ 2024, 2:37 IST
ಬೀದರ್‌ನ ಅರುಣೋದಯ ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಲಾ, ಕಾಲೇಜಿಗೊಂದು ಸಾಹಿತ್ಯ-ಸಾಂಸ್ಕೃತಿಕ ಕಾರ್ಯಕ್ರಮವನ್ನು ಬ್ರಾಹ್ಮಣ ಮಹಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಕುಲಕರ್ಣಿ ಸಸಿಗೆ ನೀರೆರೆದು ಉದ್ಘಾಟಿಸಿದರು
ಬೀದರ್‌ನ ಅರುಣೋದಯ ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಲಾ, ಕಾಲೇಜಿಗೊಂದು ಸಾಹಿತ್ಯ-ಸಾಂಸ್ಕೃತಿಕ ಕಾರ್ಯಕ್ರಮವನ್ನು ಬ್ರಾಹ್ಮಣ ಮಹಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಕುಲಕರ್ಣಿ ಸಸಿಗೆ ನೀರೆರೆದು ಉದ್ಘಾಟಿಸಿದರು    

ಬೀದರ್: ‘ವ್ಯಕ್ತಿಯನ್ನು ಸುಸಂಸ್ಕೃತ, ಉತ್ತಮ ನಾಗರಿಕನನ್ನಾಗಿ ರೂಪಿಸುವ ಸನಾತನ ಸಂಸ್ಕೃತಿ ಶ್ರೇಷ್ಠ ಸಂಸ್ಕೃತಿಯಾಗಿದೆ. ಸುಂದರ ಸಮಾಜದ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಸನಾತನ ಸಂಸ್ಕೃತಿಯನ್ನು ಅನುಸರಿಸಬೇಕು’ ಎಂದು ಬ್ರಾಹ್ಮಣ ಮಹಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಕುಲಕರ್ಣಿ ತಿಳಿಸಿದರು.

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಜಿಲ್ಲಾ ಸಮಿತಿಯ ವತಿಯಿಂದ ನಗರದ ಅರುಣೋದಯ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಶಾಲಾ, ಕಾಲೇಜಿಗೊಂದು ಸಾಹಿತ್ಯ- ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಸನಾತನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಅಗತ್ಯವಿದೆ. ಓಲೈಕೆ ರಾಜಕಾರಣದ ಕಾರಣದಿಂದಾಗಿ ಸನಾತನ ಸಂಸ್ಕೃತಿ ಪಠ್ಯದ ಭಾಗವಾಗಿಲ್ಲ. ಸದೃಢ ರಾಷ್ಟ್ರ ಹಾಗೂ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸನಾತನ ಸಂಸ್ಕೃತಿ ಪೂರ್ಣ ಪ್ರಮಾಣದಲ್ಲಿ ಪಠ್ಯದಲ್ಲಿ ಅಳವಡಿಸಬೇಕು ಎಂದು ತಿಳಿಸಿದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಜಿಲ್ಲಾ ಸಮಿತಿಯ ಅಧ್ಯಕ್ಷೆ ರಾಣಿ ಸತ್ಯಮೂರ್ತಿ ಮಾತನಾಡಿ, ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಹಾಗೂ ಭಾರತೀಯ ಸಂಸ್ಕೃತಿಯ ಅರಿವು ಮೂಡಿಸಲು ಶಾಲಾ, ಕಾಲೇಜಿಗೊಂದು ಸಾಹಿತ್ಯ- ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂರು.

ಭಕ್ತ ಕನಕದಾಸರ ಕುರಿತು ವಿಶೇಷ ಉಪನ್ಯಾಸ ನೀಡಿದ ಜಗದೇವಿ ತಿಬಶೆಟ್ಟಿ, ಕನಕದಾಸರು ಕುಲ-ಕುಲವೆಂದು ಹೊಡೆದಾಡದಿರೆಂದು ಸಮಾಜದಲ್ಲಿ ಜಾಗೃತಿ ಮೂಡಿಸಿದ್ದರು. ಸಮಾಜದ ಅಂಕು-ಡೊಂಕುಗಳನ್ನು ತಿದ್ದಲು ಪ್ರಯತ್ನಿಸಿದ್ದರು ಎಂದು ಹೇಳಿದರು.

ಅರುಣೋದಯ ಪಬ್ಲಿಕ್ ಶಾಲೆಯ ಅಧ್ಯಕ್ಷ ಸಂತೋಷಕುಮಾರ ಮಂಗಳೂರೆ ಮಾತನಾಡಿದರು. ವಿದ್ಯಾರ್ಥಿಗಳಾದ ಶಿವಾನಿ ಜಗನ್ನಾಥ, ವೈಷ್ಣವಿ ದೀಪಕ್ ಕನಕದಾಸರ ಕುರಿತು ಭಾಷಣ, ಸುಮಿತ್ರಾ ಮತ್ತು ನಂದಿನಿ ಗಾಯನ ಪ್ರಸ್ತುತಪಡಿಸಿದರು. ನಾಟ್ಯಶ್ರೀ ನೃತ್ಯಾಲಯದ ನಿರ್ದೇಶಕ ಕೆ. ಸತ್ಯಮೂರ್ತಿ, ಡಾ. ಶ್ರೇಯಾ ಮಹೀಂದ್ರಕರ್, ಸ್ವರೂಪರಾಣಿ ನಾಗೂರೆ ಹಾಜರಿದ್ದರು.

ನಾಗೇಶ ಸ್ವಾಮಿ ಮಸ್ಕಲ್ ಸ್ವಾಗತಿಸಿದರು. ಸಹ ಶಿಕ್ಷಕಿ ನೀಲಮ್ಮ ಗಜಲೆ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.