ADVERTISEMENT

ಬೀದರ್‌: ತಾರತಮ್ಯ; ಪರಿಶಿಷ್ಟರ ಮಕ್ಕಳಿಂದ ಪ್ರತಿಭಟನೆ

ಖಾಸಗಿ ಪಬ್ಲಿಕ್‌ ಶಾಲೆ ವಿರುದ್ಧ ಕ್ರಮಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 13 ಜೂನ್ 2024, 14:14 IST
Last Updated 13 ಜೂನ್ 2024, 14:14 IST
ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳು ಬೀದರ್‌ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು
ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳು ಬೀದರ್‌ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು   

ಬೀದರ್‌: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ತಾರತಮ್ಯ ಮಾಡುತ್ತಿರುವ ಖಾಸಗಿ ಪಬ್ಲಿಕ್‌ ಶಾಲೆ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಪರಿಶಿಷ್ಟ ಸಮುದಾಯದವರು ಹಾಗೂ ಅವರ ಮಕ್ಕಳು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಸರ್ಕಾರದ ನಿಯಮ ಉಲ್ಲಂಘಿಸಿದ ಖಾಸಗಿ ಶಾಲೆ ಆಡಳಿತ ಮಂಡಳಿ ವಿರುದ್ಧ ಕ್ರಮ ಜರುಗಿಸಬೇಕು. ಶಾಲೆಯ ಮಾನ್ಯತೆ ರದ್ದುಪಡಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಆಂಗ್ಲ ಮಾಧ್ಯಮ ಪಬ್ಲಿಕ್‌ ಶಾಲೆಗೆ ಸೇರಿ ಶಿಕ್ಷಣ ಪಡೆಯಬೇಕೆಂಬ ಪರಿಶಿಷ್ಟರ ಮಕ್ಕಳಿಗೆ ನ್ಯಾಯ ದೊರಕಿಸಿಕೊಡಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ADVERTISEMENT

ಮುಖಂಡರಾದ ದೇವಿದಾಸ್‌ ಚವಾಣ್‌, ಅಶೋಕ್‌ ರಾಠೋಡ್‌, ಕಾಳಿದಾಸ್‌, ಸಚಿನ್‌ ರಾಠೋಡ್‌, ಜಗದೀಶ್‌ ಚವಾಣ್‌, ನಾರಾಯಣ ಪವಾರ, ಕಮಲಾಕರ ಚವಾಣ್‌, ಸುನೀಲ್‌ಕುಮಾರ್ ಮರಕಲ್‌, ಬಸವರಾಜ, ಅಶ್ವಿನಿ ಕಾರಲೇಕರ್‌, ದೇವರಾಜ ಘೋಣೆ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.