ಹುಮನಾಬಾದ್: ಜನರಲ್ ಸ್ಟೋರ್ ಮಾಲೀಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಗುರುವಾರ ಪೋಕ್ಸೊ ಪ್ರಕರಣ ದಾಖಲಾಗಿದೆ.
ಪಟ್ಟಣದ ಜೆ.ಕೆ. ಜನರಲ್ ಸ್ಟೋರ್‌ನಲ್ಲಿ ವಿದ್ಯುತ್ ದೀಪ ಖರೀದಿಗಾಗಿ ಹೋಗಿದ್ದ, ಸಂದರ್ಭದಲ್ಲಿ 13 ವರ್ಷದ ಬಾಲಕಿಗೆ ಸ್ಟೋರ್ ಮಾಲೀಕ ಅಬ್ದುಲ್ ಗಫಾರ್ (45) ಎಂಬಾತ ಲೈಂಗಿಕ ಕಿರುಕುಳಕ್ಕೆ ಯತ್ನಿಸುತ್ತಿದ್ದ ಎಂದು ಪೋಷಕರು ದೂರು ನೀಡಿದ್ದಾರೆ.
ಪೋಷಕರು ನೀಡಿದ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಈ ಕುರಿತು ಹುಮನಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.