ADVERTISEMENT

ಬೀದರ್‌ | ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ, ಶಿಕ್ಷಕಿ ಅಮಾನತು

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 12:59 IST
Last Updated 2 ಜುಲೈ 2024, 12:59 IST
<div class="paragraphs"><p>ಅಮಾನತು(ಪ್ರಾತಿನಿಧಿಕ ಚಿತ್ರ)</p></div>

ಅಮಾನತು(ಪ್ರಾತಿನಿಧಿಕ ಚಿತ್ರ)

   

(iStock photos)

ಬೀದರ್‌: ಜಿಲ್ಲೆಯ ಕಮಲನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಶಾಲೆಯ ಶಿಕ್ಷಕ, ಶಿಕ್ಷಕಿಯನ್ನು ಡಿಡಿಪಿಐ ಸಲೀಂ ಪಾಷಾ ಅವರು ಮಂಗಳವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ADVERTISEMENT

ಶುಕ್ರವಾರ (ಜೂ.28) ಶಾಲೆಯ ತರಗತಿಯಲ್ಲಿ ವಿದ್ಯಾರ್ಥಿನಿಯೊಬ್ಬಳೇ ಇದ್ದಾಗ ಶಿಕ್ಷಕ ದೌರ್ಜನ್ಯ ಎಸಗಿದ್ದ. ಬಾಲಕಿ ವಿಷಯವನ್ನು ಕುಟುಂಬದವರೊಂದಿಗೆ ಹಂಚಿಕೊಂಡಿದ್ದಳು. ವಿಷಯ ಬಹಿರಂಗಪಡಿಸದಂತೆ ಶಾಲೆಯ ಶಿಕ್ಷಕಿ ಬಾಲಕಿಯ ಕುಟುಂಬದವರಿಗೆ ಬೆದರಿಕೆ ಹಾಕಿ, ದೌರ್ಜನ್ಯ ಎಸಗಿದ ಶಿಕ್ಷಕನ ಬೆಂಬಲಕ್ಕೆ ನಿಂತಿದ್ದರು.

ಈ ಕುರಿತು ಬಾಲಕಿಯ ತಂದೆ ಸೋಮವಾರ (ಜು.1) ಇಬ್ಬರ ವಿರುದ್ಧ ಠಾಣೆಗೆ ದೂರು ಕೊಟ್ಟಿದ್ದರು. ಸೋಮವಾರ ರಾತ್ರಿ ಶಿಕ್ಷಕ, ಶಿಕ್ಷಕಿಯನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅದರ ಬೆನ್ನಲ್ಲೇ ಈಗ ಅಮಾನತು ಮಾಡಲಾಗಿದೆ. ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.