ADVERTISEMENT

ಹುಮನಾಬಾದ್‌ | ಶಿವಾಜಿ ಮಹಾರಾಜ ಜಯಂತಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2024, 4:07 IST
Last Updated 20 ಫೆಬ್ರುವರಿ 2024, 4:07 IST
ಹುಮನಾಬಾದ್ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶಿವಾಜಿ ಮಹಾರಾಜ ಜಯಂತಿ ಆಚರಿಸಲಾಯಿತು
ಹುಮನಾಬಾದ್ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶಿವಾಜಿ ಮಹಾರಾಜ ಜಯಂತಿ ಆಚರಿಸಲಾಯಿತು   

ಹುಮನಾಬಾದ್: ‘ಭಾರತಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರವಾಗಿದೆ. ಅವರು ಕೇವಲ ಒಂದೇ ಒಂದು ಸಮುದಾಯದ ಪ್ರಗತಿಗೆ ಕಾರಣವಾಗದೇ ಎಲ್ಲ ಸಮುದಾಯಗಳ ಏಳಿಗೆಯನ್ನು ಬಯಸಿದ್ದರು’ ಎಂದು ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ ತಿಳಿಸಿದರು.

ಪಟ್ಟಣದ ತಹಶೀಲ್ ಕಚೇರಿಯಲ್ಲಿ ನಡೆದ ಛತ್ರಪತಿ ಶಿವಾಜಿ ಮಾಹಾರಾಜ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿವಾಜಿ ಮಹಾರಾಜರ ಬದುಕು, ಜೀವನ ಚರಿತ್ರೆ ಅತ್ಯಮೂಲ್ಯವಾಗಿದೆ. ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ADVERTISEMENT

ಈ ಸಂದರ್ಭದಲ್ಲಿ ತಹಶೀಲ್ದಾರ್ ಅಂಜುಂ ತಬಸುಮ್, ರವಿ ಗವಾಳಕರ್, ಜ್ಞಾನದೇವ ಧುಮಾಳೆ, ದೇವಾನಂದ ಗವಾಳಕರ್, ವೆಂಕಟೇಶ ಜಾಧವ, ರಾಮರಾವ್ ಧನಾಜಿ ಸೇರಿದಂತೆ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.