ADVERTISEMENT

ಸಿದ್ಧಗಂಗಾ ಮಠದ ತ್ರಿವಿಧ ದಾಸೋಹ ಮಾದರಿ- ಸುರೇಶ ಚನಶೆಟ್ಟಿ

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 13:26 IST
Last Updated 21 ಜನವರಿ 2022, 13:26 IST
ಬೀದರ್‌ನ ಗಾಂಧಿಗಂಜ್‍ನಲ್ಲಿ ಇರುವ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಘಟಕದ ಕಚೇರಿಯಲ್ಲಿ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆಯನ್ನು ದಾಸೋಹ ದಿನವಾಗಿ ಆಚರಿಸಲಾಯಿತು
ಬೀದರ್‌ನ ಗಾಂಧಿಗಂಜ್‍ನಲ್ಲಿ ಇರುವ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಘಟಕದ ಕಚೇರಿಯಲ್ಲಿ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆಯನ್ನು ದಾಸೋಹ ದಿನವಾಗಿ ಆಚರಿಸಲಾಯಿತು   

ಬೀದರ್: ಇಲ್ಲಿಯ ಗಾಂಧಿಗಂಜ್‍ನ ಕೈಗಾರಿಕಾ ಪ್ರದೇಶದಲ್ಲಿ ಇರುವ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಘಟಕದ ಕಚೇರಿಯಲ್ಲಿ ತುಮಕೂರಿನ ಶಿವಕುಮಾರ ಸ್ವಾಮೀಜಿ ಅವರ ತೃತೀಯ ಪುಣ್ಯಸ್ಮರಣೆಯನ್ನು ದಾಸೋಹ ದಿನವಾಗಿ ಆಚರಿಸಲಾಯಿತು.

ಶಿವಕುಮಾರ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಅವರು, ಸಿದ್ಧಗಂಗಾ ಮಠದ ತ್ರಿವಿಧ ದಾಸೋಹ ಮಾದರಿಯಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರವು ದಾಸೋಹ ದಿನ ಆಚರಣೆ ಮೂಲಕ ಶಿವಕುಮಾರ ಸ್ವಾಮೀಜಿ ಅವರ ಸತ್ಕಾರ್ಯವನ್ನು ಗೌರವಿಸಿದೆ. ದಾಸೋಹಕ್ಕೆ ಪ್ರೇರಣೆಯನ್ನೂ ನೀಡಿದೆ ಎಂದು ತಿಳಿಸಿದರು.

ADVERTISEMENT

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ, ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಬಾಲಾಜಿ ಬಿರಾದಾರ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಸಿದ್ಧಾರೆಡ್ಡಿ ನಾಗೂರಾ, ಕರ್ನಾಟಕ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಬಸವರಾಜ ಬಲ್ಲೂರ, ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿ ನಾಗಭೂಷಣ ಹುಗ್ಗೆ, ಟಿ.ಎಂ. ಮಚ್ಚೆ, ಸಂಘದ ರಮೇಶ ಪಾಟೀಲ ಪಾಶಾಪೂರ, ನಾಗೇಶ, ಜಗನ್ನಾಥ ಕಮಲಾಪುರೆ, ಶಿವಕುಮಾರ ಪಟಪಳ್ಳಿ , ಸಾಯಿಕುಮಾರ ಅಷ್ಟೂರ ಇದ್ದರು.

ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕರಂಜೆ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.