ADVERTISEMENT

75 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸಲಕರಣೆ: ರೇವಣಸಿದ್ದಪ್ಪ ಜಲಾದೆ ಹೇಳಿಕೆ

ಕೆಕೆಎಚ್‍ಆರ್‌ಎಸಿಎಸ್ ನಿರ್ದೇಶಕ

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 12:54 IST
Last Updated 24 ಜುಲೈ 2021, 12:54 IST
ಬೀದರ್‌ನ ಸಿದ್ಧಾರ್ಥ ಪ್ರೌಢಶಾಲೆಯಲ್ಲಿ ನಡೆದ ಸ್ಮಾರ್ಟ್ ಕ್ಲಾಸ್ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಮಾತನಾಡಿದರು
ಬೀದರ್‌ನ ಸಿದ್ಧಾರ್ಥ ಪ್ರೌಢಶಾಲೆಯಲ್ಲಿ ನಡೆದ ಸ್ಮಾರ್ಟ್ ಕ್ಲಾಸ್ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಮಾತನಾಡಿದರು   

ಬೀದರ್: ಕೋವಿಡ್ ಪ್ರಯುಕ್ತ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಲು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕಸಂಘದ ವತಿಯಿಂದ ಜಿಲ್ಲೆಯ 75 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಉಪಕರಣಗಳನ್ನು ಒದಗಿಸಲಾಗಿದೆ ಎಂದು ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ತಿಳಿಸಿದರು.

ನಗರದ ಸಿದ್ಧಾರ್ಥ ಪ್ರೌಢಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಶಿಕ್ಷಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಲ್‍ಇಡಿ ಪರದೆ, ಇನ್ವರ್ಟರ್, ಬ್ಯಾಟರಿ ಸೇರಿದಂತೆ ಸ್ಮಾರ್ಟ್ ಕ್ಲಾಸ್‍ಗೆ ಅಗತ್ಯ ಇರುವ ಸಾಮಗ್ರಿಗಳನ್ನು ಶಾಲೆಗಳಿಗೆ ಕೊಡಲಾಗಿದೆ ಎಂದು ಹೇಳಿದರು.

ADVERTISEMENT

ಆಧುನಿಕ ಯುಗದಲ್ಲಿ ಸ್ಮಾರ್ಟ್ ಕ್ಲಾಸ್‍ಗಳಿಗೆ ಬಹಳ ಮಹತ್ವ ಬಂದಿದೆ. ಸ್ಮಾರ್ಟ್ ಕ್ಲಾಸ್ ಬಗ್ಗೆ ಶಿಕ್ಷಕರು ಅರಿಯಬೇಕು. ಮಕ್ಕಳಿಗೆ ಪರಿಣಾಮಕಾರಿ ಬೋಧನೆ ಮಾಡಲು ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು.

ಜಿಲ್ಲೆಯಲ್ಲಿ ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಸಂಘ ಬರುವ ದಿನಗಳಲ್ಲಿ ಶಿಕ್ಷಕರಿಗೆ ಇನ್ನೂ ಅನೇಕ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಿದೆ ಎಂದು ತಿಳಿಸಿದರು.

ಜಿಲ್ಲಾ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ಮಾತನಾಡಿ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘ ದೂರದೃಷ್ಟಿಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆ. ಈ ಭಾಗದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಹೇಳಿದರು.

ಶಿಕ್ಷಕರು ಸ್ಮಾರ್ಟ್ ಕ್ಲಾಸ್ ಮೂಲಕ ಮಕ್ಕಳಿಗೆ ವಿದ್ಯೆ ಧಾರೆ ಎರೆಯಬೇಕು. ಅವರ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸಬೇಕು ಎಂದು ಸಲಹೆ ಮಾಡಿದರು.

ಸಿದ್ಧಾರ್ಥ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಎಸ್. ಪ್ರಭು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿದ್ದ ಬೆಂಗಳೂರಿನ ಮಂಜುನಾಥ ಗೌಡ ಹಾಗೂ ಲೋಕೇಶಗೌಡ ತರಬೇತಿ ನೀಡಿದರು.

ಪ್ರವರ್ಧ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ, ಸಮೃದ್ಧಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಪುನೀತ್ ಸಾಳೆ, ಸಂಘದ ತಾಲ್ಲೂಕು ಸಂಯೋಜಕ ಗಣಪತಿ ಹಡಪದ ವಿನೋದ ಪಾಟೀಲ, ನಾಗಗೊಂಡ ಉಪಸ್ಥಿತರಿದ್ದರು. ಗುರುನಾಥ ರಾಜಗೀರಾ ಸ್ವಾಗತಿಸಿದರು. ಸಚಿನ್ ನಾಗೋರಾ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.