ಔರಾದ್: ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಸೋಯಾಬಿನ್ ಖರೀದಿ ಮಾಡಲು ವಿಳಂಬ ಆಗುತ್ತಿರುವುದಕ್ಕೆ ಶಾಸಕ ಪ್ರಭು ಚವಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಬೆಂಬಲ ಬೆಲೆಯಡಿ ಸೋಯಾಬಿನ್ ಖರೀದಿ ವಿಳಂಬ’ ಶೀರ್ಷಿಕೆಯಡಿ ಪ್ರಜಾವಾಣಿಯಲ್ಲಿ ಮಂಗಳವಾರ ವಿಶೇಷ ವರದಿ ಪ್ರಕಟವಾಗಿತ್ತು. ಈ ಕುರಿತು ಶಾಸಕರು, ರಾಜ್ಯ ಸಹಕಾರ ಮಾರಾಟ ಮಂಡಳಿ ಬೀದರ್ ಶಾಖಾ ವ್ಯವಸ್ಥಾಪಕರಿಗೆ ಕರೆ ಮಾಡಿ ರೈತರಿಂದ ತಕ್ಷಣ ಸೋಯಾಬಿನ್ ಖರೀದಿಸುವಂತೆ ಸೂಚಿಸಿದ್ದಾರೆ.
ಔರಾದ್ ತಾಲ್ಲೂಕು ಸೇರಿದಂತೆ ಜಿಲ್ಲೆಯಲ್ಲಿ ಬಹುತೇಕ ಎಲ್ಲ ಕಡೆ ಸೋಯಾ ರಾಶಿ ಆಗಿದೆ. ಆದರೆ ಬೆಂಬಲ ಬಲೆಯಲ್ಲಿ ಖರೀದಿ ಮಾಡುತ್ತಿಲ್ಲ. ಎಲ್ಲ ಕಡೆ ಖರೀದಿ ಕೇಂದ್ರ ತೆರೆದಿದ್ದಾರೆ. ಆದರೆ ಎಲ್ಲಿಯೂ ಇನ್ನು ಖರೀದಿ ಆರಂಭವಾಗಿಲ್ಲ ಎಂದು ಅವರು ದೂರಿದ್ದಾರೆ.
‘ಸರ್ಕಾರದಿಂದ ಸೋಯಾಬಿನ್ ಪ್ರತಿ ಕ್ವಿಂಟಲ್‍ಗೆ ₹ 4,892 ಬೆಂಬಲ ನಿಗದಿ ಮಾಡಲಾಗಿದೆ. ಆದರೆ ಮಾರುಕಟ್ಟೆಯಲ್ಲಿ ಹೆಚ್ಚು ಎಂದರೆ ಕ್ವಿಂಟಲ್‍ಗೆ ₹ 4000 ಮಾರಾಟವಾಗುತ್ತಿದೆ. ಇದರಿಂದ ರೈತರಿಗೆ ನಷ್ಟ ಆಗುತ್ತಿದೆ. ಹೀಗಾಗಿ ಕೂಡಲೇ ಎಲ್ಲ ರೈತರಿಂದ ಸೋಯಾಬಿನ್ ಬೆಂಬಲ ಬೆಲೆಯಲ್ಲಿ ಖರೀದಿಸಬೇಕು. ಸೋಯಾ ಸೇರಿದಂತೆ ಇತರೆ ಉತ್ಪನ್ನ ನಮ್ಮ ತಾಲ್ಲೂಕಿನಿಂದ ಮಹಾರಾಷ್ಟ್ರಕ್ಕೆ ಹೋಗದಂತೆ ನೋಡಿಕೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.