ADVERTISEMENT

ಬೀದರ್‌ | ಎಸ್ಪಿ ಚನ್ನಬಸವಣ್ಣ ಬೀಳ್ಕೊಡುಗೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 15:15 IST
Last Updated 4 ಜುಲೈ 2024, 15:15 IST
ಬೀದರ್‌ ಜಿಲ್ಲಾ ಪೊಲೀಸ್‌ ಹೆಡ್‌ ಕ್ವಾಟರ್ಸ್‌ನಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಬೆಂಗಳೂರಿಗೆ ವರ್ಗವಾಗಿರುವ ಎಸ್ಪಿ ಚನ್ನಬಸವಣ್ಣ ಎಸ್‌.ಎಲ್‌. ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು
ಬೀದರ್‌ ಜಿಲ್ಲಾ ಪೊಲೀಸ್‌ ಹೆಡ್‌ ಕ್ವಾಟರ್ಸ್‌ನಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಬೆಂಗಳೂರಿಗೆ ವರ್ಗವಾಗಿರುವ ಎಸ್ಪಿ ಚನ್ನಬಸವಣ್ಣ ಎಸ್‌.ಎಲ್‌. ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು   

ಬೀದರ್‌: ಬೆಂಗಳೂರಿಗೆ ವರ್ಗಾವಣೆಗೊಂಡಿರುವ ಐಪಿಎಸ್‌ ಅಧಿಕಾರಿ ಚನ್ನಬಸವಣ್ಣ ಎಸ್‌.ಎಲ್‌. ಅವರಿಗೆ ನಗರದ ಪೊಲೀಸ್‌ ಹೆಡ್‌ಕ್ವಾರ್ಟರ್‌ನಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು. ಇದೇ ವೇಳೆ ನೂತನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ಅವರನ್ನು ಸ್ವಾಗತಿಸಲಾಯಿತು.

ಜಿಲ್ಲಾ ಪೊಲೀಸ್‌ ಇಲಾಖೆ, ವಿವಿಧ ಸಂಘ ಸಂಸ್ಥೆಗಳವರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಚನ್ನಬಸವಣ್ಣ, ‘ಬಸವಣ್ಣ, ಮಹಮೂದ್ ಗಾವಾನ್, ಗುರುನಾನಕರು ನಡೆದಾಡಿದ ನೆಲ ಬೀದರ್‌. ಇಂತಹ ಸ್ಥಳದಲ್ಲಿ ಕೆಲಸ ಮಾಡಿರುವುದಕ್ಕೆ ಬಹಳ ಖುಷಿ ಇದೆ. ಇಲಾಖೆಯಲ್ಲಿ ಎಲ್ಲರೂ ಒಂದು ತಂಡವಾಗಿ ಕೆಲಸ ಮಾಡಿದ್ದೆವು. ಇಲಾಖೆಯ 1,682 ಜನ ಎಲ್ಲ ಅಧಿಕಾರಿ, ಸಿಬ್ಬಂದಿ ವರ್ಗದವರು ಉತ್ತಮ ಕೆಲಸ ಮಾಡಿದ್ದಾರೆ. ನಮ್ಮ ಗಮನಕ್ಕೆ ಬಾರದೆ ಏನಾದರೂ ತಪ್ಪಾಗಿದ್ದರೆ, ಕೊರತೆ ಆಗಿದ್ದರೆ ತಾವೆಲ್ಲ ದೊಡ್ಡ ಮನಸ್ಸಿನಿಂದ ನಾನು ಮಾಡಿರುವ ತಪ್ಪು ಎಂದು ಕ್ಷಮಿಸಬೇಕು’ ಎಂದು ಹೇಳಿದರು.

ಎಸ್ಪಿ ಪ್ರದೀಪ್ ಗುಂಟಿ ಮಾತನಾಡಿ, ‘ಬೀದರ್‌ನಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ’ ಎಂದರು.

ADVERTISEMENT

ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿ, ‘ಕಾಲೇಜು ದಿನಗಳಿಂದಲೂ ಚನ್ನಬಸವಣ್ಣನವರು ನನಗೆ ಚಿರಪರಿಚಿತರು. ಅವರ ಕಾಲದಲ್ಲಿ ಜಿಲ್ಲೆಯಲ್ಲಿ ಉತ್ತಮ ಕೆಲಸವಾಗಿದ’ೆ ಎಂದು ಹೇಳಿದರು. 

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಮಹೇಶ ಮೇಘಣ್ಣನವರ, ಚಂದ್ರಕಾಂತ ಪೂಜಾರಿ, ಡಿವೈಎಸ್ಪಿಗಳಾದ ಶಿವನಗೌಡ ಪಾಟೀಲ, ಜೆ.ಎಸ್‌. ನ್ಯಾಮೆಗೌಡ, ಶಿವಾನಂದ ಪವಾಡಶೆಟ್ಟಿ, ಪೊಲೀಸ್‌ ಇನ್‌ಸ್ಪೆಕ್ಟರ್‌ಗಳು, ಸಿಬ್ಬಂದಿ, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.