ಬೀದರ್: ದೆಹಲಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಗೊಂಡ ಸಮಾಜದ ವತಿಯಿಂದ ತಮ್ಮ ಸಮಾಜದ ಕೇಂದ್ರ ಸಚಿವರು, ಸಂಸದರಿಗೆ ಸನ್ಮಾನಿಸಲಾಯಿತು.
ಅಖಿಲ ಭಾರತೀಯ ಗೊಂಡ ಆದಿವಾಸಿ ಸಂಘ ಮತ್ತು ಕರ್ನಾಟಕ ಗೊಂಡ ಆದಿವಾಸಿ ಸಂಘದ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾಗಿನೆಲೆ ಗುರುಪೀಠ ತಿಂಥಿಣಿಯ ಸಿದ್ಧರಾಮನಂದ ಸ್ವಾಮಿಜಿ ಸಾನ್ನಿಧ್ಯ ವಹಿಸಿದರು. ಸಂಘದ ಅಧ್ಯಕ್ಷ ಫಗ್ಗನ್ ಸಿಂಗ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಮುಖಂಡರಾದ ಬಂಡೆಪ್ಪ ಕಾಶೆಂಪುರ, ರಘುನಾಥರಾವ ಮಲ್ಕಾಪುರೆ, ಬೀದರ್, ಕಲಬುರಗಿ, ಯಾದಗಿರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಗೊಂಡ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.