ADVERTISEMENT

‘ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಿ’

​ಪ್ರಜಾವಾಣಿ ವಾರ್ತೆ
Published 12 ಜುಲೈ 2023, 14:37 IST
Last Updated 12 ಜುಲೈ 2023, 14:37 IST

ಭಾಲ್ಕಿ: ‘ಪಟ್ಟಣದಲ್ಲಿ ಬೀದಿ ನಾಯಿ, ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ಅಧಿಕಾರಿಗಳು ಇವುಗಳಿಗೆ ಕಡಿವಾಣ ಹಾಕಬೇಕು’ ಎಂದು ರಾಜ್ಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಅಂಬರೀಶ ಮಲ್ಲೇಶಿ ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಬರೆದ ಮನವಿಪತ್ರವನ್ನು ತಹಶೀಲ್ದಾರ್‌ಗೆ ಸಲ್ಲಿಸಿ ಮಾತನಾಡಿದ ಅವರು,‘ಈಚೆಗೆ ಬೀದಿ ನಾಯಿಗಳು ಗುಂಪು ಸೇರಿ ಮಕ್ಕಳ, ಮಹಿಳೆಯರ, ವೃದ್ಧರ ಮೇಲೆ ಎರಗಿ ಕಚ್ಚಿ ಗಂಭೀರ ಗಾಯಗೊಳಿಸಿದ ಪ್ರಕರಣಗಳು ನಡೆದಿವೆ. ಗಾಯಗೊಂಡವರು ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ತೆರಳಿದಾಗ ಆ್ಯಂಟಿ ರೇಬಿಸ್ ಚುಚ್ಚುಮದ್ದು ಲಭ್ಯವಿಲ್ಲ ಎಂದು ಹೇಳುತ್ತಿದ್ದಾರೆ ಎಂದು ದೂರಿದರು.

ಬಡ, ಕೂಲಿ ಕಾರ್ಮಿಕರು ಖಾಸಗಿಯವರಿಂದ ದುಬಾರಿ ಬೆಲೆಗೆ ಚುಚ್ಚುಮದ್ದು ಖರೀದಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಅತ್ಯಂತ ಶೋಚನೀಯ ಸಂಗತಿ. ಸಚಿವರು ಸಂಬಂಧಪಟ್ಟ ಇಲಾಖೆಯವರಿಗೆ ತಾಕೀತು ಮಾಡಿ ಪಟ್ಟಣದಲ್ಲಿನ ಬೀದಿ ನಾಯಿಗಳ ಮತ್ತು ದನಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.