ADVERTISEMENT

ವಾಲ್ಮೀಕಿ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 15:46 IST
Last Updated 8 ಅಕ್ಟೋಬರ್ 2024, 15:46 IST
ಬೀದರ್‌ನಲ್ಲಿ ಮಂಗಳವಾರ ನಡೆದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿದರು
ಬೀದರ್‌ನಲ್ಲಿ ಮಂಗಳವಾರ ನಡೆದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿದರು   

ಬೀದರ್‌: ‘ಪ್ರತಿ ವರ್ಷದಂತೆ ಈ ವರ್ಷವೂ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುವುದು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ತಿಳಿಸಿದರು.

ನಗರದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅ.17ರಂದು ಬೆಳಿಗ್ಗೆ 8.30ಕ್ಕೆ ಎಲ್ಲ ಸರ್ಕಾರಿ ಕಚೇರಿ, ಶಾಲಾ- ಕಾಲೇಜುಗಳಲ್ಲಿ ಮಹರ್ಷಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 10.30 ಪೂಜೆ ಸಲ್ಲಿಸಿ, ಆನಂತರ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಪ್ರಮುಖ ಮಾರ್ಗಗಳ ಮೂಲಕ ಚನ್ನಬಸವ ಪಟ್ಟದ್ದೇವರಿ ಜಿಲ್ಲಾ ರಂಗಮಂದಿರದ ವರೆಗೆ ಮೆರವಣಗೆ ಜರುಗಲಿದೆ. ಮಧ್ಯಾಹ್ನ 12.30ಕ್ಕೆ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

ನಗರಸಭೆಯಿಂದ ಕುಡಿಯುವ ನೀರು, ಸ್ವಚ್ಛತೆ ಕೈಗೊಳ್ಳಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಮೆರವಣಿಗೆಯಲ್ಲಿ ಎರಡು ಕಲಾ ತಂಡಗಳು ಇರುವಂತೆ ನೋಡಿಕೊಳ್ಳಬೇಕು. ಎಲ್ಲ ಸರ್ಕಾರಿ ಕಚೇರಿಗಳಿಗೆ ವಿದ್ಯುತ್‌ ದೀಪಾಲಂಕಾರ ಮಾಡಬೇಕು. ಹಿರಿಯ ಸಾಹಿತಿ ರಾಮಚಂದ್ರ ಗಣಾಪೂರ ವಿಶೇಷ ಉಪನ್ಯಾಸ ನೀಡುವರು ಎಂದು ವಿವರಿಸಿದರು.

ADVERTISEMENT

ಉಪವಿಭಾಗಾಧಿಕಾರಿ ಮುಹಮ್ಮದ್‌ ಶಕೀಲ್‌, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶಿವಮಾನಪ್ಪ, ಡಿವೈಎಸ್ಪಿ ಶಿವನಗೌಡ ಪಾಟೀಲ, ಎಮ್.ಎಸ್. ಕಟಗಿ, ಪಂಡಿತ ಚಿದ್ರಿ, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಜಗನ್ನಾಥ ಜಮಾದಾರ, ಶಾರದಾ ಕಲ್ಮಲಕರ್, ನಂದಕುಮಾರ್, ಸಂತೋಷ ಜೋಳದಾಪಕೆ, ಮಾಳಪ್ಪ ಅಡಸಾರೆ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.