ADVERTISEMENT

ಕೊಚ್ಚಿ ಹೋದ ಸಿಂದೋಲ್‌ ರಸ್ತೆ: ಮನ್ನಳ್ಳಿ ರಸ್ತೆಯಲ್ಲಿ ಸಂಚಾರ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 14 ಜೂನ್ 2024, 16:54 IST
Last Updated 14 ಜೂನ್ 2024, 16:54 IST

ಬೀದರ್‌: ಭಂಗೂರ ವಾಯಾ ಮನ್ನಳ್ಳಿ ರಾಜ್ಯ ಹೆದ್ದಾರಿ 122ರಲ್ಲಿ ಬರುವ ತಾಲ್ಲೂಕಿನ ಸಿಂದೋಲ್‌ ಗ್ರಾಮ ಸಮೀಪದ ರಸ್ತೆ ಮಳೆ ನೀರಿಗೆ ಸಂಪೂರ್ಣ ಕೊಚ್ಚಿ ಹೋಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್‌ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 65 ಹೈದರಾಬಾದ್‌–ಮುಂಬೈ ರಸ್ತೆ ಹಾಗೂ ಮನ್ನಳ್ಳಿಯಿಂದ ಚಿಂಚೋಳಿ ಕಡೆಗೆ ವಾಹನಗಳಲ್ಲಿ ಹೋಗುವವರು ಪರ್ಯಾಯ ಮಾರ್ಗದ ಮೂಲಕ ಸಂಚರಿಸಬಹುದು. ಮನ್ನಳ್ಳಿಯಿಂದ ಬಗದಲ್‌ ಮಾರ್ಗದ ಮೂಲಕ ರಾಷ್ಟ್ರೀಯ ಹೆದ್ದಾರಿಗೆ ಸಂಚರಿಸಬಹುದು. ಮನ್ನಳ್ಳಿಯಿಂದ ಚಿಂತಲಗೇರಾ–ಧರ್ಮಾಪುರ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿಗೆ ಸೇರಬಹುದು ಎಂದು ಶುಕ್ರವಾರ ರಾತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಚ್ಚಿ ಹೋಗಿರುವ ರಸ್ತೆಯಲ್ಲಿ ಕಾರಂಜಾ ನದಿಗೆ ಅಡ್ಡಲಾಗಿ ಬಾಕ್ಸ್‌ ಕಲ್ವರ್ಟ್‌ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕಾಮಗಾರಿ ಸ್ಥಳದಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ರಸ್ತೆ ಮಳೆ ನೀರಿಗೆ ಕೊಚ್ಚಿಹೋಗಿ ಈ ಸಮಸ್ಯೆ ಉದ್ಭವಿಸಿದೆ. ಯಾವುದೇ ರೀತಿಯ ಅನಾಹುತಗಳು ಸಂಭವಿಸಬಾರದು ಎಂಬ ಉದ್ದೇಶಕ್ಕೆ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ವಿವರಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.