ಬೀದರ್: ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ವತಿಯಿಂದ ನಗರದಲ್ಲಿ ಶನಿವಾರ ಜಾಗೃತಿ ಜಾಥಾ ನಡೆಯಿತು.
ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಜಾಥಾಕ್ಕೆ ಚಾಲನೆ ನೀಡಿದರು.
ಜನಸಂಖ್ಯೆ ಹೆಚ್ಚಳವು ಅನೇಕ ಸಮಸ್ಯೆಗಳಿಗೆ ಕಾರಣವಾಗಲಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಕುಟುಂಬ ಕಲ್ಯಾಣ ವಿಧಾನ ಅನುಸರಿಸಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಇಂದುಮತಿ ಪಾಟೀಲ ಮಾತನಾಡಿದರು.
ಡಾ. ಕೃಷ್ಣಾರೆಡ್ಡಿ ಲಕ್ಕಾ, ಡಾ. ರಾಜಶೇಖರ ಪಾಟೀಲ, ಡಾ. ದೀಪಾ ಖಂಡ್ರೆ, ಸಂಗಪ್ಪ ಕಾಂಬಳೆ, ಡಾ. ಲಕ್ಷ್ಮಿಕಾಂತ ವಲ್ಲೇಪುರೆ ಇದ್ದರು. ಶ್ರಾವಣ ಜಾಧವ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.