ADVERTISEMENT

ಗುಂಡ್ಲುಪೇಟೆ: ಹುಲಿ ದಾಳಿಗೆ 3 ತಿಂಗಳ ಮರಿಯಾನೆ ಸಾವು

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2024, 14:15 IST
Last Updated 6 ಅಕ್ಟೋಬರ್ 2024, 14:15 IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ಹುಲಿ ದಾಳಿಯಿಂದ ಮರಿಯಾನೆ ಮೃತಪಟ್ಟಿರುವುದನ್ನು ವೈದ್ಯರು ಪರಿಕ್ಷೀಸಿದರು
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ಹುಲಿ ದಾಳಿಯಿಂದ ಮರಿಯಾನೆ ಮೃತಪಟ್ಟಿರುವುದನ್ನು ವೈದ್ಯರು ಪರಿಕ್ಷೀಸಿದರು   

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ 3 ತಿಂಗಳ ಮರಿಯಾನೆ ಹುಲಿ ದಾಳಿಗೆ ಸಿಲುಕಿ ಮೃತಪಟ್ಟಿದೆ.

ಕುಂದಕೆರೆ ವಲಯ ಅರಣ್ಯ ನೌಕರರು ಗಸ್ತು ತಿರುಗುತ್ತಿದ್ದಾಗ ಮಾಹಿತಿ ದೊರೆತಿದ್ದು,  ಹಿರಿಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.  ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್  ಭೇಟಿ ನೀಡಿ ಪರಿಶೀಲಿಸಿದರು. ಪಶು ವೈದ್ಯ ಡಾ.ವಾಸೀಂ ಮಿರ್ಜಾ  ಮರಿಯಾನೆ ಶವ ಪರೀಕ್ಷೆ ನಡೆಸಿ, ಪ್ರಯೋಗಾಲಯಕ್ಕೆ ಕಳುಹಿಸಿಕೊಡಲು ಮಾದರಿ ಸಂಗ್ರಹಿಸಿದರು.

 ಮರಿಯಾನೆ ಶವವನ್ನು ಇಲಾಖೆ ನಿಯಮದಂತೆ ಹೂಳಲಾಯಿತು ಎಂದು ವಲಯ ಅರಣ್ಯಾಧಿಕಾರಿ ಬಿ.ಎಂ.ಮಲ್ಲೇಶ್ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.