ADVERTISEMENT

ರಾಷ್ಟ್ರ ಮಟ್ಟದ ವಸ್ತು ಪ್ರದರ್ಶನ:ಗುಂಡ್ಲುಪೇಟೆಯ ವಿದ್ಯಾರ್ಥಿನಿಗೆ ಮೋದಿ ಮೆಚ್ಚುಗೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2024, 15:28 IST
Last Updated 4 ಫೆಬ್ರುವರಿ 2024, 15:28 IST
ಗುಂಡ್ಲುಪೇಟೆ ತಾಲ್ಲೂಕಿನ ಭೋಗಯ್ಯನಹುಂಡಿ ಗ್ರಾಮದ ಶಿಕ್ಷಕಿ ರೇಖಾ ಸೋಮಶೇಖರ್ ಪುತ್ರಿ ಸಿಂಚನ.ಎಸ್ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮಾದರಿಯನ್ನು ಪ್ರಸ್ತುತ ಪಡಿಸಿದರು
ಗುಂಡ್ಲುಪೇಟೆ ತಾಲ್ಲೂಕಿನ ಭೋಗಯ್ಯನಹುಂಡಿ ಗ್ರಾಮದ ಶಿಕ್ಷಕಿ ರೇಖಾ ಸೋಮಶೇಖರ್ ಪುತ್ರಿ ಸಿಂಚನ.ಎಸ್ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮಾದರಿಯನ್ನು ಪ್ರಸ್ತುತ ಪಡಿಸಿದರು   

ಗುಂಡ್ಲುಪೇಟೆ: ತಾಲ್ಲೂಕಿನ ಭೋಗಯ್ಯನಹುಂಡಿ ಗ್ರಾಮದ ಶಿಕ್ಷಕಿ ರೇಖಾ ಸೋಮಶೇಖರ್ ಪುತ್ರಿ ಸಿಂಚನ.ಎಸ್ ದೆಹಲಿಯಲ್ಲಿ ನಡೆದ ರಾಷ್ಟ್ರ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರಸ್ತುತ ಪಡಿಸಿದ ಮಾದರಿಯನ್ನು ಪ್ರಧಾನಿ ನರೇಂದ್ರ ಮೋದಿ ಮಾದರಿಯ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿನಿ ಸಿಂಚನ.ಎಸ್ ಚಾಮರಾಜನಗರ ವಂಡರ ಬಾಳು ಜವಹಾರ್ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹಾಗೂ ಜೀವಶಾಸ್ತ್ರ ಶಿಕ್ಷಕ ಶಶಿಧರ್ ಮಾರ್ಗದರ್ಶನದಲ್ಲಿ ಮಾಡೆಲ್ ತಯಾರಿಸಿದ್ದರು. ಚಾಮರಾಜನಗರ ಜಿಲ್ಲೆಗೆ ಕೀರ್ತಿ ತಂದಿದ್ದಾರೆಂದು ವಿದ್ಯಾರ್ಥಿನಿಯನ್ನು ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಅಭಿನಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT