ಚಾಮರಾಜನಗರ: ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಅಂಗವಾಗಿ ನಗರದಲ್ಲಿ ಮಂಗಳವಾರ ಅರಿವು ಜಾಥಾ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಕ್ಕಳ ಕಲ್ಯಾಣ ಸಮಿತಿ, ಬಾಲನ್ಯಾಯ ಮಂಡಳಿ, ಶ್ರೀ ವರಮಹಾಲಕ್ಷ್ಮಿ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ, ಮೊಬಿಲಿಟಿ ಇಂಡಿಯಾ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಜಾಥಾಗೆ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಧರ ಎಂ. ಚಾಲನೆ ನೀಡಿದರು.
ದೇವಸ್ಥಾನದ ಮುಂಭಾಗದಿಂದ ಹೊರಟ ಜಾಥಾವು ಜೈಭುವನೇಶ್ವರಿ ವೃತ್ತ, ಬಿ. ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತಲುಪಿತು. ಬಳಿಕ ಗಣ್ಯರು ಜಿಲ್ಲಾಡಳಿತ ಭವನದ ಆವರಣದಲ್ಲಿ ಗಿಡ ನೆಟ್ಟರು.
ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಚೇರಿ ಸಭಾಂಗಣದಲ್ಲಿ ಬೇಟಿ ಬಚಾವೊ ಬೇಟಿ ಪಡಾವೊ ಮತ್ತು ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಗೀತಾ ಲಕ್ಷ್ಮಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ. ಮಂಜುನಾಥ ಪ್ರಸನ್ನ, ಕಾರ್ಮಿಕ ಇಲಾಖೆಯ ಎಂ. ಮಹೇಶ್, ಸಹಾಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾದ ಗೋವಿಂದರಾಜು, ಮೊಬಿಲಿಟಿ ಇಂಡಿಯಾದ ಮುಖ್ಯಸ್ಥ ರಾಜಣ್ಣ, ಜಿ.ಬಂಗಾರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.