ADVERTISEMENT

ಕಾಂಗ್ರೆಸ್‌ ಸದಸ್ಯರು ಗೈರು: ಚಾಮರಾಜನಗರ ನಗರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2024, 11:14 IST
Last Updated 9 ಸೆಪ್ಟೆಂಬರ್ 2024, 11:14 IST
<div class="paragraphs"><p>ಚಾಮರಾಜನಗರ ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಸುರೇಶ್‌ ಹಾಗೂ ಉಪಾಧ್ಯಕ್ಷರಾಗಿ ಮಮತಾ ಬಾಲಸುಬ್ರಹ್ಮಣ್ಯ ಆಯ್ಕೆಯಾದರು</p></div>

ಚಾಮರಾಜನಗರ ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಸುರೇಶ್‌ ಹಾಗೂ ಉಪಾಧ್ಯಕ್ಷರಾಗಿ ಮಮತಾ ಬಾಲಸುಬ್ರಹ್ಮಣ್ಯ ಆಯ್ಕೆಯಾದರು

   

ಚಾಮರಾಜನಗರ: ಕಾಂಗ್ರೆಸ್‌ ಹಾಗೂ ಎಸ್‌ಡಿಪಿಐ ಮೈತ್ರಿಕೂಟವನ್ನು ಸೋಲಿಸುವ ಮೂಲಕ ಚಾಮರಾಜನಗರ ನಗರಸಭೆಯಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದೆ. ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಸುರೇಶ್‌ ಹಾಗೂ ಉಪಾಧ್ಯಕ್ಷರಾಗಿ ಮಮತಾ ಬಾಲಸುಬ್ರಹ್ಮಣ್ಯ ಆಯ್ಕೆಯಾಗಿದ್ದಾರೆ.

ಸೋಮವಾರ ನಗರಸಭೆ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್ ಹಾಗೂ ಮಮತಾ ಬಾಲಸುಬ್ರಹ್ಮಣ್ಯ ತಲಾ 15 ಮತಗಳನ್ನು ಪಡೆದರು. ಕಾಂಗ್ರೆಸ್‌ ಅಭ್ಯರ್ಥಿ ರಾಜಪ್ಪ ಹಾಗೂ ಎಸ್‌ಡಿಪಿಐ ಅಭ್ಯರ್ಥಿ ಅಬ್ರಾರ್ ಅಹಮದ್‌ ತಲಾ 14 ಮತಗಳನ್ನು ಪಡೆದರು. ಒಂದು ಮತದ ಅಂತರದಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳು ಬಿಜೆಪಿ ಪಾಲಾದವು.

ADVERTISEMENT

ಕಾಂಗ್ರೆಸ್‌ನ ಮೂವರು ಸದಸ್ಯರು ಗೈರು:

ಕಾಂಗ್ರೆಸ್ ಸದಸ್ಯರಾದ ಆರ್‌.ಪಿ.ನಂಜುಡಸ್ವಾಮಿ, ನೀಲಮ್ಮ ಹಾಗೂ ಭಾಗ್ಯಮ್ಮ ಚುನಾವಣೆಗೆ ಗೈರಾಗಿದ್ದರು. ಕಾಂಗ್ರೆಸ್ ಸದಸ್ಯೆ ಚಂದ್ರಕಲಾ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅಡ್ಡ ಮತದಾನ ಮಾಡಿದರು. ಪರಿಣಾಮ ಬಿಜೆಪಿಗ ಗೆಲುವಿನ ಹಾದಿ ಸುಗಮವಾಯಿತು. ಮತ್ತೊಂದೆಡೆ ಬಿಜೆಪಿ ಸದಸ್ಯ ಮಹದೇವಯ್ಯ ಕಾಂಗ್ರೆಸ್ ಪರವಾಗಿ ಅಡ್ಡಮತದಾನ ಮಾಡಿದರೂ ಕಾಂಗ್ರೆಸ್‌ಗೆ ಗೆಲುವು ಸಿಗಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.