ADVERTISEMENT

ಚಾಮರಾಜನಗರ ಜಿಲ್ಲಾ ದಸರಾಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2024, 7:18 IST
Last Updated 7 ಅಕ್ಟೋಬರ್ 2024, 7:18 IST
<div class="paragraphs"><p>ಚೆಲುವ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಲನೆ ನೀಡಿದರು.</p></div>

ಚೆಲುವ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಲನೆ ನೀಡಿದರು.

   

ಚಾಮರಾಜನಗರ: ಮೈಸೂರು ದಸರಾ ಭಾಗವಾಗಿ ಹಮ್ಮಿಕೊಂಡಿರುವ ಚೆಲುವ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಲನೆ ನೀಡಿದರು.

ಸೋಮವಾರ ಮಧ್ಯಾಹ್ನ 12.15ಕ್ಕೆ ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನೆರವೇರಿಸುವ ಮೂಲಕ ಸಚಿವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.

ADVERTISEMENT

ನಂತರ ಚಾಮರಾಜೇಶ್ವರ ದೇವಸ್ಥಾನದ ಉದ್ಯಾನದಲ್ಲಿ ನಾಡದೇವತೆಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಚಿತ್ರಸಂತೆ ಉದ್ಘಾಟಿಸಿದರು. ನಂತರ ದೇವಸ್ಥಾನದ ಆವರಣದಲ್ಲಿ ಮಹಿಳಾ ದಸರಾ ಉದ್ಘಾಟಿಸಿ, ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ಉದ್ಘಾಟಿಸಿದರು.

ಅ.7ರಿಂದ 9ರವರೆಗೆ ಚಾಮರಾಜನಗರ ದಸರಾ ನಡೆಯಲಿದ್ದು, ಜನಪದ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಯುವ ದಸರಾ, ರೃತ ದಸರಾ, ಮಹಿಳಾ ದಸರಾ, ಕವಿಗೋಷ್ಠಿ, ಪಾರಂಪರಿಕ ನಡಿಗೆ, ಮ್ಯಾರಥಾನ್, ಚಲನಚಿತ್ರೋತ್ಸವ, ಗ್ರಾಮೀಣ ದಸರಾ, ಫಲ ಪುಷ್ಪ ಪ್ರದರ್ಶನ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ದಸರಾ ಹಿನ್ನೆಲೆಯಲ್ಲಿ ನಗರದ ತುಂಬೆಲ್ಲ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ನಿರ್ಮಿಸಿರುವ ಮುಖ್ಯ ವೇದಿಕೆ, ಜಿಲ್ಲಾಡಳಿತ ಭವನದ ಜೆ.ಎಚ್ ಪಟೇಲ್ ಸಭಾಂಗಣ ಹಾಗೂ ಡಾ.ರಾಜಕುಮಾರ್ ಜಿಲ್ಲಾರಂಗಮಂದಿರದಲ್ಲಿ ನಿರಂತರ ಕಾರ್ಯಕ್ರಮಗಳು ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.