ADVERTISEMENT

ಚಾಮರಾಜನಗರ ಲೋಕಸಭಾ ಕ್ಷೇತ್ರ | ಇತಿಹಾಸ ಸೃಷ್ಟಿ: ಸಚಿವ ಮಹದೇವಪ್ಪ

ಹನೂರು ಕ್ಷೇತ್ರದಲ್ಲಿ ಅಭ್ಯರ್ಥಿಗೆ ಚಲಾವಣೆಯಾದ ಮತ

​ಪ್ರಜಾವಾಣಿ ವಾರ್ತೆ
Published 11 ಜೂನ್ 2024, 14:14 IST
Last Updated 11 ಜೂನ್ 2024, 14:14 IST
ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.   

ಹನೂರು: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಇದುವರೆಗೂ ನಡೆದಿರುವ 16 ಚುನಾವಣೆಗಳಿಗಿಂತ ಈ ಬಾರಿ ಅತ್ಯಧಿಕ ಮತಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬಂದಿರುವುದು ಸಂತಸ ತಂದಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಸಿ. ಮಹದೇವಪ್ಪ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ  ಅಂದಿನ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್  ಬಿಜೆಪಿಯಿಂದ ಆಯ್ಕೆಯಾಗಿದ್ದರು. ಇವರ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್  ಅಭ್ಯರ್ಥಿ ಆರ್. ಧ್ರುವನಾರಾಯಣ್    ಅಲ್ಪ ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಈ ಇಬ್ಬರೂ ಈಗ ಇಲ್ಲದಿರುವುದು ದುರದೃಷ್ಟಕರ. ಈ ಬಾರಿ 1,88,000 ಮತಗಳ ಅಂತರವು ಗೆಲುವಿನಲ್ಲಿ ಇತಿಹಾಸ ಸೃಷ್ಟಿಸಿದೆ ಎಂದರು.

ADVERTISEMENT

ಹನೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿ ಕುಂದಿಲ್ಲ ಎಂದು ಮತದಾರರು, ಕಾರ್ಯಕರ್ತರು  ಸಾಬೀತು ಮಾಡಿದ್ದಾರೆ. ಈ ಒಗ್ಗಟ್ಟನ್ನು ಸದಾ ಇಟ್ಟುಕೊಳ್ಳಬೇಕು. ಕ್ಷೇತ್ರದ  ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು  ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಮಾತನಾಡಿ , ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿಯು ಇದೇ ರೀತಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದರು.

 ಶಾಸಕ ಎ.ಆರ್ ಕೃಷ್ಣಮೂರ್ತಿ, ಕಾಡಾ ಅಧ್ಯಕ್ಷ ಮರಿಸ್ವಾಮಿ, ಆರ್.‌ನರೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುಕುಂದವರ್ಮ, ಈಶ್ವರ್, ಪಟ್ಟಣ ಪಂಚಾಯಿತಿ ಸದಸ್ಯ ಗಿರೀಶ್, ಸುದೇಶ್  ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.