ADVERTISEMENT

ಚಾಮರಾಜನಗರದಲ್ಲಿ ಭರ್ಜರಿ ಮಳೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2024, 6:52 IST
Last Updated 5 ಜೂನ್ 2024, 6:52 IST
ಬೇಡರಪುರದಲ್ಲಿ ಮತ ಎಣಿಕೆಗೆ ಕಾರ್ಯಕ್ಕೆ ನಿಯೋಜನೆ ಗೊಂಡಿದ್ದ ಭದ್ರತಾ ಸಿಬ್ಬಂದಿ ಮಳೆಯಿಂದ ರಕ್ಷಿಸಿಕೊಳ್ಳಲು ತಾತ್ಕಾಲಿಕ ಡೇರೆಯ ಆಶ್ರಯ ಪಡೆದರು
ಬೇಡರಪುರದಲ್ಲಿ ಮತ ಎಣಿಕೆಗೆ ಕಾರ್ಯಕ್ಕೆ ನಿಯೋಜನೆ ಗೊಂಡಿದ್ದ ಭದ್ರತಾ ಸಿಬ್ಬಂದಿ ಮಳೆಯಿಂದ ರಕ್ಷಿಸಿಕೊಳ್ಳಲು ತಾತ್ಕಾಲಿಕ ಡೇರೆಯ ಆಶ್ರಯ ಪಡೆದರು   

ಚಾಮರಾಜನಗರ: ಚಾಮರಾಜನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ ಬಿರುಸಿನ ಮಳೆಯಾಗಿದೆ. 

ಚಾಮರಾಜನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಆರಂಭಗೊಂಡ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಎಡೆಬಿಡದೆ ಸುರಿಯಿತು. ಚರಂಡಿಗಳು ಉಕ್ಕಿದ್ದರಿಂದ ರಸ್ತೆಯಲ್ಲಿ ನೀರು ಹರಿಯಿತು. 

ಚಾಮರಾಜನಗರ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಭಾರಿ ಮಳೆಯಾಗಿದ್ದು, ಬೇಡರಪುರ ವ್ಯಾಪ್ತಿಯಲ್ಲಿ ಚುನಾವಣಾ ಮತ ಎಣಿಕೆ ಮುಕ್ತಾಯದ ಹಂತದಲ್ಲಿ ಮಳೆಯಾಗಿದ್ದರಿಂದ ಭದ್ರತಾ ಸಿಬ್ಬಂದಿ, ಚುನಾವಣಾ ಅಧಿಕಾರಿಗಳು, ಜನರು ಓಡಾಡುವುದಕ್ಕೆ ತೊಂದರೆ ಅನುಭವಿಸಿದರು. 

ADVERTISEMENT

ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ 1.22 ಸೆಂ.ಮೀ ಮಳೆಯಾಗಿದೆ. 

ಚಾಮರಾಜನಗರದಲ್ಲಿ ಮಂಗಳವಾರ ಮಧ್ಯಾಹ್ನ ಸುರಿದ ಮಳೆಗೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ನೀರು ನಿಂತಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.