ADVERTISEMENT

ಚಾಮರಾಜನಗರ | ಕತ್ತಲಿನಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆ !

​ಪ್ರಜಾವಾಣಿ ವಾರ್ತೆ
Published 10 ಜೂನ್ 2024, 14:33 IST
Last Updated 10 ಜೂನ್ 2024, 14:33 IST
ಚಾಮರಾಜನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಕತ್ತಲಿನಲ್ಲಿ ನಡೆಯಿತು.
ಚಾಮರಾಜನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಕತ್ತಲಿನಲ್ಲಿ ನಡೆಯಿತು.   

ಚಾಮರಾಜನಗರ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ 20 ನಿಮಿಷಗಳಿಗೂ ಹೆಚ್ಚು ಕಾಲ ಕತ್ತಲು ಆವರಿಸಿತ್ತು.

ಸಭೆಯ ನಡುವೆ ವಿದ್ಯುತ್ ವ್ಯತ್ಯಯವಾದ ಬಳಿಕ, ಸಿಬ್ಬಂದಿ ಜನರೇಟರ್ ವ್ಯವಸ್ಥೆ ಮಾಡಲಿಲ್ಲ. ಹೀಗಾಗಿ ಒಬ್ಬರ ಮುಖ ಮತ್ತೊಬ್ಬರಿಗೆ ಕಾಣದಷ್ಟು ಕತ್ತಲು ಕವಿದಿತ್ತು. ಆದರೂ ಸಚಿವರು ಸಭೆ ನಿಲ್ಲಿಸಲಿಲ್ಲ.

ಯಾರಿಗೆ ಸಚಿವರು ಪ್ರಶ್ನೆ ಕೇಳುತ್ತಿದ್ದಾರೆ, ಯಾವ ಅಧಿಕಾರಿ ಉತ್ತರ ನೀಡುತ್ತಿದ್ದಾರೆ ಎಂಬ ಗೊಂದಲವೂ ಏರ್ಪಟ್ಟಿತ್ತು. ಕೆಡಿಪಿಯಂತಹ ಮಹತ್ವದ ಸಭೆಯಲ್ಲಿ ವಿದ್ಯುತ್ ಕೈಕೊಟ್ಟಾಗ ಪರ್ಯಾಯ ವ್ಯವಸ್ಥೆ ಮಾಡದ ಬಗ್ಗೆ ಕೆಲವು ಅಧಿಕಾರಿಗಳೂ ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.