ಚಾಮರಾಜನಗರ: ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ಭಾನುವಾರ ನಗರದ 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆಯಿತು.
ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು 5100 ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿತ್ತು. ಆದರೆ, 2,785 ಮಂದಿ ಪರೀಕ್ಷೆಗೆ ಹಾಜರಾಗಿದ್ದರು.
‘ಯಾವುದೇ ಅಡಚಣೆ ಇಲ್ಲದೆ ಪರೀಕ್ಷೆ ನಡೆದಿದೆ. ಜಿಲ್ಲೆಯವರು ಮಾತ್ರವಲ್ಲದೆ ಹೊರ ಜಿಲ್ಲೆಗಳ ಅಭ್ಯರ್ಥಿಗಳಿಗೂ ಜಿಲ್ಲೆಯ ಪರೀಕ್ಷಾ ಕೇಂದ್ರಗಳನ್ನು ಹಂಚಿಕೆ ಮಾಡಲಾಗಿತ್ತು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ‘ಪ್ರಜಾವಾಣಿ’ಗೆ ತಿಳಿಸಿದರು.
ಸಿಬ್ಬಂದಿ ನಿಯೋಜನೆ:
ಪರೀಕ್ಷಾ ಕೇಂದ್ರಗಳ ಬಳಿ ಭದ್ರತೆಗಾಗಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು. ಅಭ್ಯರ್ಥಿಗಳ ಬಯೊಮೆಟ್ರಿಕ್ ನೋಂದಣಿ ದೃಢೀಕರಣದ ಬಳಿಕ ಪರೀಕ್ಷೆ ಬರೆಯಲು ಅವಕಾಶ ನೀಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.