ADVERTISEMENT

ಗುಂಡ್ಲುಪೇಟೆ | ಶಿಕ್ಷಣಕ್ಕೆ ಮೊದಲ ಆದ್ಯತೆ: ಶಾಸಕ ಗಣೇಶ್ ಪ್ರಸಾದ್

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2023, 13:56 IST
Last Updated 1 ಡಿಸೆಂಬರ್ 2023, 13:56 IST
ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಹೋಬಳಿಯ ಹೊಸಹಳ್ಳಿ ಕಾಲೋನಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಡಾ.ಬಿ.ಆರ್.ಅಂಬೇಡ್ಕರ್ ಭವನವನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ಉದ್ಘಾಟಿಸಿದರು.
ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಹೋಬಳಿಯ ಹೊಸಹಳ್ಳಿ ಕಾಲೋನಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಡಾ.ಬಿ.ಆರ್.ಅಂಬೇಡ್ಕರ್ ಭವನವನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ಉದ್ಘಾಟಿಸಿದರು.   

ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಹೋಬಳಿಯ ಹೊಸಹಳ್ಳಿ ಕಾಲೋನಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಡಾ.ಬಿ.ಆರ್.ಅಂಬೇಡ್ಕರ್ ಭವನವನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ‘ಗ್ರಾಮಸ್ಥರ ಬಹುದಿನ ಬೇಡಿಕೆಯಾದ ಅಂಬೇಡ್ಕರ್ ಭವನ ಸುಸಜ್ಜಿತವಾಗಿ ನಿರ್ಮಾಣಗೊಂಡು ಉದ್ಘಾಟನೆಯಾಗಿದೆ. ಇದನ್ನು ಉತ್ತಮ ರೀತಿಯಲ್ಲಿ ಗ್ರಾಮದಲ್ಲಿ ನಡೆಯುವ ಶುಭ ಸಮಾರಂಭಕ್ಕೆ ಬಳಕೆ ಮಾಡಿಕೊಳ್ಳಿ. ಗ್ರಾಮಕ್ಕೆ ರಸ್ತೆ ಸೇರಿದಂತೆ ಇನ್ನಿತರ ಹಲವು ಸೌಲಭ್ಯಗಳ ಅವಶ್ಯಕತೆಯಿದ್ದು, ಹಂತ ಹಂತವಾಗಿ ಅನುದಾನ ನೀಡಲಾಗುವುದು’ ಎಂದು ತಿಳಿಸಿದರು.

‘ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಾಗಿದ್ದು, ಶಾಲೆಗಳಲ್ಲಿ ಅಗತ್ಯವಿರುವ ಕಟ್ಟಡ, ಕೊಠಡಿ, ಗ್ರಂಥಾಲಯ ಸೇರಿದಂತೆ ಇನ್ನಿತರ ಹಲವು ಸೌಲಭ್ಯ ನೀಡಲು ಯೋಜನೆ ರೂಪಿಸಲಾಗಿದೆ. ಜೊತೆಗೆ ಸಂಬಂಧಪಟ್ಟ ಸಚಿವರ ಜೊತೆ ಅನುದಾನಕ್ಕೆ ಮನವಿ ಮಾಡಲಾಗಿದೆ. ಗ್ರಾಮೀಣ ಪ್ರದೇಶದ ಜನರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಉನ್ನತ ಶಿಕ್ಷಣ ಕೊಡಿಸಿ ದೊಡ್ಡ ಹುದ್ದೆಗಳಿಗೆ ಏರುವಂತೆ ಮಾಡಬೇಕು. ಇದಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು’ ಎಂದು ತಿಳಿಸಿದರು.

ADVERTISEMENT

‘ವಿಧಾನಸಭಾ ಚುನಾವಣೆಯಲ್ಲಿ ಜನರು ನನ್ನ ಮೇಲೆ ಹೆಚ್ಚಿನ ಭರವಸೆ ಇಟ್ಟು ಅಧಿಕ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಅದರಂತೆ ನಾನು ಕೂಡ ಕೆಲಸ ಮಾಡಲು ಸಿದ್ಧನಿದ್ದೇನೆ. ಈ ಹಿಂದೆ ಮಾಜಿ ಸಚಿವ ಎಚ್.ಎಸ್.ಮಹದೇವಪ್ರಸಾದ್ ಅನೇಕ ಶಾಶ್ವತ ಕೆಲಸಗಳನ್ನು ಮಾಡಿದ್ದು, ಅವರ ಹಾದಿಯಲ್ಲಿಯೇ ಸಾಗಿ ಜನರ ನೋವು-ನಲಿವಿಗೆ ಸ್ಪಂದಿಸಲಾಗವುದು’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡ ಎ.ಸಿದ್ದರಾಜು, ಎಚ್.ಎಸ್.ನಂಜಪ್ಪ, ಕಾಂಗ್ರೆಸ್ ಮುಖಂಡರಾದ ದೇವರಹಳ್ಳಿ ಪ್ರಭು, ಶಿವರಾಂ, ಶಿವಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.