ಹನೂರು: ಮಲೆಮಹದೇಶ್ವರ ವನ್ಯಧಾಮದಲ್ಲಿ ಕಂದಕಕ್ಕೆ ಬಿದ್ದಿದ್ದ ಆನೆಯನ್ನು ಜೆಸಿಬಿ ಹಾಗೂ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸಹಾಯದಿಂದ ಸುರಕ್ಷಿತವಾಗಿ ಮೇಲೆತ್ತಿ ಅರಣ್ಯಕ್ಕೆ ಬಿಡಲಾಯಿತು.
ಹನೂರು ಬಫರ್ ವಲಯದ ಕಣಿವೆ ಬೋರೆ ಅರಣ್ಯ ಪ್ರದೇಶದ ಬುಧವಾರ ಮುಂಜಾನೆ ಗಂಡಾನೆಯೊಂದು ಕಂದಕಕ್ಕೆ ಬಿದ್ದು ಹೊರಳಾಡುತ್ತಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬೇಟಿ ನೀಡಿ ನೋಡಿದಾಗ ಕಂದಕದೊಳಗೆ ಬಿದ್ದು ಒದ್ದಾಡುತ್ತಿರುವುದು ಕಂಡು ಬಂದಿದೆ.
ಕೂಡಲೇ ಸಿಬ್ಬಂದಿ ಸ್ಥಳಕ್ಕೆ ಜೆಸಿಬಿ ಹಾಗೂ ಅಗ್ನಿಶಾಮಕ ಠಾಣಾ ಸಿಬ್ಬಂದಿ ಕರೆಸಿ ಅವರ ಸಹಾಯದಿಂದ ಆನೆಯನ್ನು ಸುರಕ್ಷಿತವಾಗಿ ಮೇಲೆತ್ತಿ ಮತ್ತೆ ಅರಣ್ಯಕ್ಕೆ ಬಿಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.