ADVERTISEMENT

ಎತ್ತಿನ ಗಾಡಿ ಮೂಲಕ ಆಹಾರ ಪದಾರ್ಥ ವಿತರಣೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2021, 2:49 IST
Last Updated 1 ಜೂನ್ 2021, 2:49 IST
ಹೊಂಗಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಎತ್ತಿನ ಗಾಡಿಗಳ ಮೂಲಕ ಆಹಾರ ಪದಾರ್ಥಗಳನ್ನು ವಿತರಿಸುತ್ತಿರುವುದು
ಹೊಂಗಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಎತ್ತಿನ ಗಾಡಿಗಳ ಮೂಲಕ ಆಹಾರ ಪದಾರ್ಥಗಳನ್ನು ವಿತರಿಸುತ್ತಿರುವುದು   

ಗುಂಡ್ಲುಪೇಟೆ: ತಾಲ್ಲೂಕಿನ ಕಾಡಂಚಿನ ಗ್ರಾಮದಲ್ಲಿರುವ ಹೊಂಗಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಅಕ್ಷರ ದಾಸೋಹದ ನಡಿಗೆ ಮಕ್ಕಳ ಮನೆ ಕಡೆಗೆ ಎಂಬ ಘೋಷವಾಕ್ಯದಡಿ ಎತ್ತಿನ ಗಾಡಿಗಳ ಮೂಲಕ ಆಹಾರ ಪದಾರ್ಥಗಳನ್ನು ವಿತರಿಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕ ಬಿ.ಮಹ ದೇಶ್ವರಸ್ವಾಮಿ ಮಾತನಾಡಿ, ಕೊರೊನಾ ಮುಂಜಾಗ್ರತಾ ಕ್ರಮ ಅನುಸರಿಸಿ ಶಾಲೆ ವತಿಯಿಂದ ಎಸ್‍ಡಿಎಂಸಿ ಸದಸ್ಯರ ಸಹಕಾರದಿಂದ ಬೆಳಿಗ್ಗೆ 8 ರಿಂದ 10 ರವರೆಗೆ ಶಾಲೆ 111 ಮಕ್ಕಳ ಮನೆ ಮನೆಗೆ ಎತ್ತಿನಗಾಡಿ ಮೂಲಕ ತೆರಳಿ ಸರ್ಕಾರ ನಿಗದಿಪಡಿಸಿರುವ ಪ್ರಮಾಣದಲ್ಲಿ 83 ದಿನದ ಅಕ್ಕಿ, ಗೋಧಿ, ಎಣ್ಣೆ, ಉಪ್ಪು ಆಹಾರ ಪದಾರ್ಥಗಳನ್ನು ವಿತರಿಸಲಾಗಿದೆ ಎಂದರು.

ಶಾಲೆಗಳು ಮುಚ್ಚಿರುವುದರಿಂದ ಬಿಸಿಯೂಟ ಇಲ್ಲದ ಪರಿಣಾಮ ಶಿಕ್ಷಣ ಇಲಾಖೆಯು ಮಕ್ಕಳ ಅನುಕೂಲಕ್ಕಾಗಿ ಪಡಿತರ ವಿತರಿಸಿದ್ದು, ಇದರ ಜೊತೆಗೆ ದಾನಿಗಳ ಸಹಕಾರದಿಂದ ಪ್ರತಿ ವಿದ್ಯಾರ್ಥಿಗೆ ಒಂದು ಡಜನ್ ಬಿಸ್ಕೆಟ್ ವಿತರಿಸಿ ಕೊರೊನಾ ಜಾಗೃತಿ ಮೂಡಿಸಲಾಗಿದೆ ಎಂದರು.

ADVERTISEMENT

ಎಸ್‍ಡಿಎಂಸಿ ಅಧ್ಯಕ್ಷ ಮಾದಪ್ಪ, ಉಪಾಧ್ಯಕ್ಷ ಸುಬ್ಬಪ್ಪ, ಸದಸ್ಯ ಸ್ವಾಮಿ, ಗುರುಸ್ವಾಮಿ, ಸುಧಾ, ರಾಣಿ ಸಮವಸ್ತ್ರ ಧರಿಸಿ ಗಮನ ಸೆಳೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.